ಮಂಗಳೂರು: ಖಾಸಗಿ ಬಸ್ ಹಾಗೂ ಓಮ್ನಿ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚ್ಲಂಪಾಡಿಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೇಶ್ರೀ ಹೆಸರಿನ ಖಾಸಗಿ ಬಸ್ ಹಾಗೂ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಉಡುಪಿ ಮೂಲದ ಓಮ್ನಿ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಕಾರ್ಕಳ ಮೂಲದ 28 ವರ್ಷದ ಸಂದೇಶ್ ಎಂಬವರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Advertisement
Advertisement
ಮೃತದೇಹವನ್ನು ನೆಲ್ಯಾಡಿಯ ಆಸ್ಪತ್ರೆಯಲ್ಲಿರಿಸಲಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ಕಮರಿಗೆ ಉರುಳಿದ್ದು ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
Advertisement
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Advertisement