ಹಾಸನ: ಮೂರು ವರ್ಷದ ಮಗು ಆಟವಾಡುತ್ತಾ ಟ್ರ್ಯಾಕ್ಟರ್ (Tractor) ಕೀ ಆನ್ ಮಾಡಿದ ಪರಿಣಾಮ ತಂದೆಯ ಮೇಲೆ ಚಕ್ರ ಹರಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ (Holenarasipur) ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ನಡೆದಿದೆ.
ಯಶ್ವಂತ್ (37) ಟ್ರಾಕ್ಟರ್ ಹರಿದು ಸಾವನ್ನಪ್ಪಿದ ವ್ಯಕ್ತಿ. ಸಾರಿಗೆ ಸಂಸ್ಥೆಯ ನೌಕರರಾಗಿದ್ದ ಅವರು, ಅರಕಲಗೂಡು ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಬೆಂಗಳೂರಿನ ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಕೊಲೆ
ಹೊಸ ಮನೆ ಕಟ್ಟಿಸುತ್ತಿದ್ದ ಯಶ್ವಂತ್, ವರಮಹಾಲಕ್ಷ್ಮೀ ಹಬ್ಬದ ದಿನದಂದು ಆರ್‌ಸಿಸಿಗಾಗಿ ಟ್ರಾಕ್ಟರ್‌ನಲ್ಲಿ ಸೆಂಟ್ರಿಂಗ್ ಸಾಮಾಗ್ರಿಗಳನ್ನು ತರಿಸಿದ್ದರು. ಈ ವೇಳೆ ಮಗುವನ್ನು ಆಟವಾಡಿಸುತ್ತಾ ಟ್ರ್ಯಾಕ್ಟರ್ ಮೇಲೆ ಕೂರಿಸಿದ್ದರು. ಮಗು ಆಟವಾಡುತ್ತ ಟ್ರ್ಯಾಕ್ಟರ್ ಕೀ ಆನ್ ಮಾಡಿದ್ದು, ಟ್ರ್ಯಾಕ್ಟರ್ ಏಕಾಏಕಿ ಮುಂದಕ್ಕೆ ಚಲಿಸಿದೆ.
ಮಗು ಕೆಳಗೆ ಬೀಳುತ್ತದೆ ಎಂದು ಗಾಬರಿಯಲ್ಲಿ, ರಕ್ಷಣೆಗೆ ಬಂದ ಯಶ್ವಂತ್ ಮೇಲೆ ಟ್ರ್ಯಾಕ್ಟರ್ ಚಕ್ರ ಹರಿದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜೆರಾಕ್ಸ್ ಪ್ರತಿ ಸುಟ್ಟಿದ್ದಕ್ಕೆ ಗ್ರಾಹಕರು, ಮಾಲೀಕರ ಮಧ್ಯೆ ಗಲಾಟೆ – ಪುತ್ತೂರಿನಲ್ಲಿ ಪೊಲೀಸ್ ಜೀಪಿಗೆ ಮುತ್ತಿಗೆ, ಲಾಠಿ ಪ್ರಹಾರ
