ಮೊಬೈಲ್‌ನಲ್ಲಿ ಮಾತಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

Public TV
1 Min Read
hassan heart attack

ಹಾಸನ: ಮೊಬೈಲ್‌ (Mobile) ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಹಾಸನ (Hassana) ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.

ಹೊಳೆನರಸೀಪುರದ ಕಾರ್ಯಾಲಯ ಬಡಾವಣೆಯ ನಿವಾಸಿ ವೀರೂಪಾಕ್ಷ (40) ಸಾವನ್ನಪ್ಪಿದ ವ್ಯಕ್ತಿ. ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದ ಅರಣ್ಯ ಕಚೇರಿ ಬಳಿ ಈ ಘಟನೆ ನಡೆದಿದ್ದು, ಘಟನೆಯ ಎಲ್ಲಾ ದೃಶ್ಯಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೀರೂಪಾಕ್ಷ ಅಂಗಡಿಯ ಮುಂಭಾಗದಲ್ಲಿ ಕುಳಿತು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ. ಈ ವೇಳೆ ಹಠಾತ್‌ ಹೃದಯಾಘಾತವಾಗಿದೆ. ನೋಡ ನೋಡುತ್ತಿದ್ದಂತೆ ವೀರೂಪಾಕ್ಷ ಕುಸಿದು ಬಿದ್ದಿದ್ದಾನೆ. ಇದನ್ನೂ ಓದಿ: ಬಿಜೆಪಿ ಟಿಕೆಟ್ ಆಕಾಂಕ್ಷಿ ಅನಿಲ್ ಕುಮಾರ್ ಮೀಸೆಗೆ ಹೆದರಿದ್ರಾ ಜಿ.ಪರಮೇಶ್ವರ್?

ಈ ವೇಳೆ ಅಲ್ಲಿದ್ದ ಸ್ಥಳೀಯರು ವೀರೂಪಾಕ್ಷನನ್ನು ಆಸ್ಪತ್ರೆಗೆ ಶಿಫ್ಟ ಮಾಡಿದ್ದಾರೆ. ಆದರೆ ವಿರೂಪಾಕ್ಷ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಮೆಡಿಕಲ್ ಶಾಪ್ ನಡೆಸುತ್ತಿದ್ದ ವೀರೂಪಾಕ್ಷ ಅಪಾರ ಸ್ನೇಹ ಬಳಗವನ್ನು ಹೊಂದಿದ್ದರು. ಇದನ್ನೂ ಓದಿ: 12ನೇ ತರಗತಿಯಲ್ಲಿ ವಧುವಿಗೆ ಕಡಿಮೆ ಮಾರ್ಕ್ಸ್‌ – ಮದುವೆ ರದ್ದು ಮಾಡಿದ ವರ

Share This Article
Leave a Comment

Leave a Reply

Your email address will not be published. Required fields are marked *