ನವದೆಹಲಿ: ಸತ್ತಿರುವ ಇಲಿಯನ್ನು ಮನೆಯ ಮುಂದೆ ಎಸೆದಿದ್ದಕ್ಕೆ ವ್ಯಕ್ತಿಯೊಬ್ಬನನ್ನು ರಾಡ್‍ನಿಂತ ಹೊಡೆದು, ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.
ದೆಹಲಿಯ ಕಿರಾರಿ ಪ್ರದೇಶದಲ್ಲಿ ಸೋಮವಾರ ಘಟನೆ ನಡೆದಿದ್ದು, ಹಲ್ಲೆಗೆ ಒಳಗಾಗಿದ್ದ 40 ವರ್ಷದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿದ್ದಾನೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಮೃತ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ತಕ್ಷಣ ಆರೋಪಿಯ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ. ಆದರೆ ಆರೋಪಿಯನ್ನು ಇನ್ನೂ ವಶಕ್ಕೆ ಪಡೆದಿಲ್ಲ ಎಂದು ಪೊಲೀಸ್ ಉಪ ಆಯುಕ್ತ ಸೆಜು ಪಿ ಕುರುವಿಲ್ಲಾ ಸ್ಪಷ್ಟಣೆ ನೀಡಿದ್ದಾರೆ. ಇದನ್ನು ಓದಿ: ನಾಯಿಮರಿಯಿಂದಾಗಿ 40 ವರ್ಷದ ವ್ಯಕ್ತಿಯ ಪ್ರಾಣವೇ ಹೋಯ್ತು!
ಈ ಹಿಂದೆ ಇಂತಹದ್ದೇ ಪ್ರಕರಣವೊಂದು ದೆಹಲಿಯಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬ ಕಾರ್ ಪಾರ್ಕ್ ಮಾಡುತ್ತಿದ್ದ ವೇಳೆ ನಾಯಿಯ ಮೇಲೆ ಹರಿಸಿದ್ದ. ಇದರಿಂದ ಕೋಪಗೊಂಡ ನಾಯಿಯ ಮಾಲೀಕ ವ್ಯಕ್ತಿಯನ್ನು ಥಳಿಸಿ, ಕೊಲೆ ಮಾಡಿದ್ದ. ಒಂದೇ ತಿಂಗಳಿನಲ್ಲಿ ಇಂತಹ ಎರಡು ಪ್ರಕರಣಗಳು ನಡೆದಿದ್ದು, ದೆಹಲಿ ಸಾರ್ವಜನಿಕರಲ್ಲಿ ಆತಂಕವನ್ನು ಉಂಟು ಮಾಡಿವೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv