ತುಮಕೂರು: ಕಾರೊಂದು (Car) ಆಕಸ್ಮಿಕವಾಗಿ ಹೊತ್ತಿ ಉರಿದ (Fire Accident) ಪರಿಣಾಮ ಅದರಲ್ಲಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಶಿರಾ (Shira) ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ನಾಗೇಂದ್ರ (30) ಸಜೀವ ದಹನವಾದ ವ್ಯಕ್ತಿ. ತುಮಕೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕಾರಿನಲ್ಲಿದ್ದ ಯುವತಿಗೆ ಗಾಯಗಳಾಗಿದ್ದು, ಆಕೆಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ – ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ದುರ್ಮರಣ
ಇಬ್ಬರು ಕಾರಿನಲ್ಲಿ ಬೆಂಗಳೂರಿನಿಂದ ಅಂಕೋಲಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೂವರನ್ನು ಕೊಲೆ ಮಾಡಿದ್ದು ನಾವೇ – ಪೊಲೀಸರ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಜೋಡಿ
