ಬೆಳಗಾವಿ: ಕಾರು (Car) ಸಮೇತ ನದಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮ ಬಳಿಯ ಘಟಪ್ರಭಾ ನದಿಯಲ್ಲಿ(Ghataprabha River) ನಡೆದಿದೆ.
ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ನಿವಾಸಿ ಕಿರಣ ಲಕ್ಷ್ಮಣ ನಾವಲಗಿ(45) ಮೃತ ದುರ್ದೈವಿ. ಬ್ಯೂಟಿ ಪಾರ್ಲರ್ ಉದ್ಯಮ ನಡೆಸುತ್ತಿದ್ದ ಮೃತ ಕಿರಣ ಡಿಸೆಂಬರ್ 30 ರಂದು ಮನೆಯಲ್ಲಿ ಯಾರಿಗೂ ಹೇಳದೇ ಕಾರು ತೆಗೆದುಕೊಂಡು ತೆರಳಿದ್ದರು. ಇದನ್ನೂ ಓದಿ: ಅಶ್ವಮೇಧ ಕುದುರೆಯ ಓಟಕ್ಕೆ ಪ್ರಶಸ್ತಿಗಳ ಸುರಿಮಳೆ – KSRTCಗೆ 9 ಬಹುಮಾನ
Advertisement
Advertisement
ಉದ್ಯಮದಲ್ಲಿ ನಷ್ಟವಾದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
Advertisement
ಸ್ಥಳಕ್ಕೆ ಯಮಕನಮರಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ನದಿಯಲ್ಲಿ ಬಿದ್ದಿದ್ದ ಕಾರು ಹಾಗೂ ಶವವನ್ನು ಹೊರತೆಗೆದಿದ್ದಾರೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement