ಮೈಸೂರು: ಗಣೇಶ ವಿಸರ್ಜನೆ ಮೆರವಣಿಗೆ (Ganesh Procession) ವೇಳೆ ಟ್ರ್ಯಾಕ್ಟರ್‌ನಿಂದ ಕುಸಿದುಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಹುಣಸೂರು (Hunsur) ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಆಟೋ ರಾಜು (34) ಎಂದು ಗುರುತಿಸಲಾಗಿದೆ. ಗಣಪತಿಯನ್ನು ಗ್ರಾಮಸ್ಥರು ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಮನೆ ಬಳಿ ಬಂದ ಗಣಪನಿಗೆ ಪೂಜೆ ಸಲ್ಲಿಸಲು ಟ್ರ್ಯಾಕ್ಟರ್ ಹತ್ತಿದ್ದ ರಾಜು, ಪೂಜೆ ಸಲ್ಲಿಸುತ್ತಾ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಹುಣಸೂರು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತು. ಇದನ್ನೂ ಓದಿ: ಗಣೇಶನ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ – ಯುವಕ ಸ್ಥಳದಲ್ಲೇ ಸಾವು
ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಗಣೇಶನ ಮೆರವಣಿಗೆಯನ್ನು ಅರ್ಧಕ್ಕೆ ನಿಲ್ಲಿಸಿ, ನೇರವಾಗಿ ಚಿಕ್ಕ ಕೆರೆಯಲ್ಲಿ ಗಣಪತಿಯನ್ನು ಗ್ರಾಮಸ್ಥರು ವಿಸರ್ಜನೆ ಮಾಡಿದ್ದಾರೆ. ಇದನ್ನೂ ಓದಿ: ಸಾಗರ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್ ಸ್ಫೋಟ – ಯುವಕನಿಗೆ ಗಂಭೀರ ಗಾಯ