ಚೆನ್ನೈ: ಮದುವೆ ಮನೆಯಲ್ಲಿ ಕುದಿಯುವ ರಸಮ್ ಪಾತ್ರೆಗೆ ಆಕಸ್ಮಿಕವಾಗಿ ಬಿದ್ದು ಯುವಕ ಸಾವಿಗೀಡಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ನೆರೆಯ ತಿರುವಳ್ಳೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 21 ವರ್ಷದ ಯುವಕ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಯುವಕ ಕಾಲೇಜು ವಿದ್ಯಾರ್ಥಿನಿಯಾಗಿದ್ದ. ಇದನ್ನೂ ಓದಿ: ಹಾಳು ಬಾವಿಯಲ್ಲಿ ವೃದ್ಧೆಯ ಶವ ಪತ್ತೆ
Advertisement
Advertisement
ಅಡುಗೆ ಕೆಲಸಕ್ಕೆ ಅರೆಕಾಲಿಕ ಕೆಲಸಗಾರನಾಗಿದ್ದ. ಮದುವೆ ಸಮಾರಂಭದಲ್ಲಿ ಊಟ ಬಡಿಸುತ್ತಿದ್ದ. ಈ ವೇಳೆ ಆಕಸ್ಮಿಕವಾಗಿ ರಸಂ ಪಾತ್ರೆಯೊಳಗೆ ಬಿದ್ದು ಮೃತಪಟ್ಟಿದ್ದಾನೆ. ತೀವ್ರ ಸುಟ್ಟಗಾಯಗಳಾಗಿರುವ ಸಂತ್ರಸ್ತನನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪಟ್ಟಿದ್ದ.
Advertisement
Advertisement
ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಉಗ್ರರ ಸಂಪರ್ಕಕ್ಕೆ ಮೊಬೈಲ್ ಆಪ್ ಬಳಕೆ – 14 ಅಪ್ಲಿಕೇಷನ್ ನಿಷೇಧಿಸಿದ ಕೇಂದ್ರ