ಲಕ್ನೋ: ಸ್ನೇಹಿತನ (Friend) ಸಾವಿನಿಂದ ಬೇಸತ್ತ ವ್ಯಕ್ತಿಯೊಬ್ಬ ಅಂತ್ಯ ಸಂಸ್ಕಾರದ ವೇಳೆ ಚಿತೆಗೆ (Funeral Pyre) ಜಿಗಿದು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ (UttarPradesh) ನಡೆದಿದೆ.
ನಾಗ್ಲಾ ಖಂಗರ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಅಶೋಕ್ (42) ಎಂಬವರು ಕ್ಯಾನ್ಸರ್‍ನಿಂದ ಬಳಲುತ್ತಿದ್ದು, ಶನಿವಾರ ಬೆಳಗ್ಗೆ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರ ಯಮುನಾ ನದಿಯ (Yamuna River) ದಡದಲ್ಲಿ ನಡೆಯುತ್ತಿತ್ತು. ಈ ವೇಳೆ ಮೃತನ ಸ್ನೇಹಿತ ಚಿತೆಗೆ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ RJD ವಿರುದ್ಧ ಓವೈಸಿ ವಾಗ್ದಾಳಿ
ಚಿತೆಗೆ ಜಿಗಿದ ವ್ಯಕ್ತಿಯನ್ನು ಆನಂದ್ (40) ಎಂದು ಗುರುತಿಸಲಾಗಿದೆ. ಕೂಡಲೇ ಅಲ್ಲಿದ್ದ ಜನರು ಆತನನ್ನು ಬೆಂಕಿಯಿಂದ ಹೊರಗೆಳೆದು ಆಗ್ರಾದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಆನಂದ್ ಅವರ ಕುಟುಂಬದ ಸದಸ್ಯರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನೂತನ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಆರ್‌ಜೆಡಿ – ಕಾನೂನು ಸಮರಕ್ಕೆ ಮುಂದಾದ ಬಿಜೆಪಿ