ಹಾಸನ : ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತರೊಬ್ಬರು ಹೃದಯಾಘಾತದಿಂದ(Heart Attack) ಸಾವನ್ನಪ್ಪಿದ್ದಾರೆ.
ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್ (43) ಮೃತಪಟ್ಟ ವ್ಯಕ್ತಿ. ಹಾಸನಾಂಬೆ ದೇವಾಲಯದ(Hasanamba Temple) ಮುಖ್ಯದ್ವಾರದ ಬಳಿ ಗಿರೀಶ್ ಸರತಿ ಸಾಲಿನಲ್ಲಿ ನಿಂತಿದ್ದರು.
ಸಾಮಾನ್ಯ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಹೃದಯಾಘಾತದಿಂದ ನೆಲಕ್ಕೆ ಬಿದ್ದಿದ್ದಾರೆ. ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದು, ಪೊಲೀಸರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಇದನ್ನೂ ಓದಿ: ಬೆಂಕಿಗೆ ತುಪ್ಪ ಸುರಿಯೋ ಕೆಲಸ ನಾನು ಮಾಡಲ್ಲ: ಚೇತನ್‌ಗೆ ಉಪೇಂದ್ರ ಟಾಂಗ್
ಹಾಸನದ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.