ಚಿತ್ರದುರ್ಗ: ರಾತ್ರಿ ಮಲಗಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ (Heart Attack) ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ (Chitradurga) ನಡೆದಿದೆ.
ಚಿತ್ರದುರ್ಗ ತಾಲೂಕಿನ ಸೊಲ್ಲಾಪುರ (Sollapura) ನಾಯಕನಹಟ್ಟಿ ಗ್ರಾಮದ ಕಂಪ್ಲೇಶ್ (34) ಸಾವನ್ನಪ್ಪಿದ ವ್ಯಕ್ತಿ. ರಾತ್ರಿ ಮಲಗಿದ್ದಾಗ ಕಂಪ್ಲೇಶ್‌ಗೆ ಎದೆನೋವು ಕಾಣಿಸಿತ್ತು. ಇದನ್ನೂ ಓದಿ: ಒಂದೂವರೆ ತಿಂಗಳ ಗಂಡು ಮಗುವನ್ನು ನೀರಿನ ಹಂಡೆಯಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ
ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಬರುವ ಮಾರ್ಗಮಧ್ಯೆ ಕಂಪ್ಲೇಶ್ ಕೊನೆಯುಸಿರೆಳೆದಿದ್ದಾರೆ. ಬೆಳಗಿನ ಜಾವ 4:30ರ ಸುಮಾರಿಗೆ ಘಟನೆ ನಡೆದಿದೆ. ಇದನ್ನೂ ಓದಿ: ಕೋವಿಡ್ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ