ಮುಂಬೈ: (Mumbai) ಗಾರ್ಬಾ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯ ವಿರಾರ್ ಪಟ್ಟಣದಲ್ಲಿ ನಡೆದಿದೆ.
ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ವಿರಾರ್ನ ಗ್ಲೋಬಲ್ ಸಿಟಿ ಕಾಂಪ್ಲೆಕ್ಸ್ನಲ್ಲಿ ನಡೆದ ಗಾರ್ಬಾ ಕಾರ್ಯಕ್ರಮದಲ್ಲಿ ಮನೀಶ್ ನಾರಾಪ್ಜಿ ಸೋನಿಗ್ರಾ ಅವರು ನೃತ್ಯ ಮಾಡುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ವಿರಾರ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ಕೊಟ್ಟಿಗೆಗೆ ಕರೆದೊಯ್ದು 10ರ ಬಾಲಕನಿಂದ ಅತ್ಯಾಚಾರ
35 ವಯಸ್ಸಿನ ಮನೀಶ್ ನೃತ್ಯ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ತಂದೆ ನಾರಾಪ್ಜಿ ಸೋನಿಗ್ರಾ (66) ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮನೀಶ್ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ.
ಮಗನ ಸಾವಿನ ಸುದ್ದಿ ಕೇಳಿ ಆತನ ತಂದೆಯೂ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 30 ವರ್ಷದ ಹಳೆ ದ್ವೇಷ – ವೃದ್ಧದಂಪತಿ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಮಾಜಿ ಸೈನಿಕ