ಅಮರಾವತಿ: ಅರ್ಚಕನ (Priest) ವೇಷ ಧರಿಸಿದ್ದ ವ್ಯಕ್ತಿಯೊಬ್ಬ ತೆಲಗು ದೇಶಂ ಪಕ್ಷದ ಮುಖಂಡ (TDP leader) ಹಾಗೂ ಮಾಜಿ ಸಂಸದ ಶೇಷಗಿರಿ ರಾವ್ ಪೋಲ್ನಾಟಿ (Seshagiri Rao Polnati) ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಆಂಧ್ರ ಪ್ರದೇಶದಲ್ಲಿ (Andhra Pradesh) ನಡೆದಿದೆ.
ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ತುನಿ ನಗರದ ಶೇಷಗಿರಿ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ದಾಳಿಕೋರನ ಗುರುತು ಪತ್ತೆ ಹಚ್ಚಿಲ್ಲ. ಹಾಗೂ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಮತ ಕನ್ನ ಆರೋಪ- ಚಿಲುಮೆ ಸಂಸ್ಥೆ ವಿರುದ್ಧ ತನಿಖೆಗೆ ಮುಂದಾದ ಬಿಬಿಎಂಪಿ
ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಅರ್ಚಕನ ವೇಷ ಧರಿಸಿದ್ದ ವ್ಯಕ್ತಿಯೊಬ್ಬರು ಟಿಡಿಪಿ ಮುಖಂಡ ಮತ್ತು ಮಾಜಿ ಸಂಸದ ಶೇಷಗಿರಿರಾವ್ ಪೋಲ್ನಾಟಿ ಅವರ ಮನೆಗೆ ನುಗ್ಗಿ ಹರಿತವಾದ ಕತ್ತಿಯಿಂದ ದಾಳಿ ನಡೆಸಿ ಗಾಯಗೊಳಿಸಿದ್ದಾರೆ. ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿ ತಲೆಮರೆಸಿಕೊಂಡಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಅವರಿಂದ್ಲೆ ಬೆನ್ನು ತಟ್ಟಿಸಿಕೊಂಡಿರುವ ರಾಮದಾಸ್‌ಗೆ ಕಿರುಕುಳ ಕೊಡುವಷ್ಟು ಶಕ್ತಿ ನನಗಿಲ್ಲ – ಪ್ರತಾಪ್ ಸಿಂಹ