ಕುಡಿದ ಮತ್ತಿನಲ್ಲಿ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿದ ಭೂಪ

Public TV
1 Min Read
kolar car accident

ಕೋಲಾರ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

ಜಿಲ್ಲೆಯ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ. ರೈಲ್ವೆ ಪ್ಲಾಟ್‌ಫಾರ್ಮ್ ಮೇಲಿಂದ ರೈಲ್ವೆ ಹಳಿಗಳ ಮೇಲೆ ಅಪ್ಪಳಿಸಿದೆ. ಪರಿಣಾಮವಾಗಿ ಕಾರು ಮತ್ತು ರೈಲ್ವೆ ಹಳಿಗೆ ಡ್ಯಾಮೇಜ್‌ ಆಗಿದೆ. ಇದನ್ನೂ ಓದಿ: ಆಕಸ್ಮಿಕ ಬೆಂಕಿ – 40 ಕುರಿಗಳು ಸಜೀವ ದಹನ

KLR DRINK DRIVE AV 4

ಕಾರು ಮಾಲೀಕ ರಾಕೇಶ್‌ ಎಂಬಾತ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಈ ಅವಾಂತರ ಸೃಷ್ಟಿಸಿದ್ದಾನೆ. ರೈಲ್ವೆ ಪೊಲೀಸರು ಜೆಸಿಬಿ ಸಹಾಯದಿಂದ ಕಾರು ತೆರವುಗೊಳಿಸಿದ್ದಾರೆ.

ಬಂಗಾರಪೇಟೆ ರೈಲ್ವೆ ಪೊಲೀಸರು ಕಾರು ಮಾಲೀಕ ರಾಕೇಶ್‌ನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬಂಗಾರಪೇಟೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಂಡುಕೋರರ ಜೊತೆ ಗುಂಡಿನ ದಾಳಿ; 18 ಪಾಕ್‌ ಸೈನಿಕರು ಸಾವು – 23 ಉಗ್ರರ ಹತ್ಯೆ

Share This Article