ಕಲಬುರಗಿ: ತನ್ನ ಸಾವಿನ ಬಳಿಕ ಯಾರಿಗೂ ಹೊರೆಯಾಗಬಾರದು ಎಂದು 15 ವರ್ಷಗಳ ಹಿಂದೆಯೇ ಗುಂಡಿ ತೋಡಿದ್ದ ವ್ಯಕ್ತಿ ನಿಧನರಾಗಿದ್ದು, ಇದೀಗ ಅವರೇ ತೋಡಿದ ಗುಂಡಿಯಲ್ಲಿ ಅಂತ್ಯಸಂಸ್ಕಾರ (Bury) ಮಾಡಲಾಗಿದೆ.
ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿ (Jewargi) ತಾಲೂಕಿನ ಹಿಪ್ಪರಗಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅದೇ ಗ್ರಾಮದ ಸಿದ್ದಪ್ಪ (96) ನಿಧನ ಹೊಂದಿದ ವ್ಯಕ್ತಿ. ತಮ್ಮ ಸಾವಿನ ಬಳಿಕ ಯಾರಿಗೂ ಹೊರೆಯಾಗಬಾರದು ಎಂಬ ಕಾರಣಕ್ಕೆ 15 ವರ್ಷಗಳ ಹಿಂದೆ ಅವರೇ ತಮ್ಮ ಅಂತ್ಯಸಂಸ್ಕಾರಕ್ಕೆಂದು ಗುಂಡಿ ತೋಡಿದ್ದರು. ಇದನ್ನೂ ಓದಿ: Shakthi Scheme Effect- ಟ್ರಿಪ್‍ಗೆ ಹೋದ ಪತ್ನಿ ಮನೆಗೆ ಬಂದಿಲ್ಲವೆಂದು ಪತಿ ಅವಾಂತರ
ಸಿದ್ದಪ್ಪ ಹಾಗೂ ಅವರ ಪತ್ನಿ ನೀಲಮ್ಮಳಿಗಾಗಿ 2 ಗುಂಡಿಯನ್ನು ತೋಡಲಾಗಿತ್ತು. 6 ವರ್ಷಗಳ ಹಿಂದೆ ನೀಲಮ್ಮ ನಿಧನರಾದಾಗ ಅವರಿಗಾಗಿ ತೋಡಿದ್ದ ಗುಂಡಿಯಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿತ್ತು. ಇದೀಗ ಸಿದ್ದಪ್ಪ ಕೂಡಾ ವಿಧಿವಶರಾಗಿದ್ದು, ಪತ್ನಿಯ ಪಕ್ಕದ ಗುಂಡಿಯಲ್ಲಿ ಅವರ ಅಂತ್ಯಸಂಸ್ಕಾರ ಮಾಡಲಾಗಿದೆ. ಇದನ್ನೂ ಓದಿ: ಮದುವೆಯಾಗಲು ಹೆಣ್ಣು ಸಿಗದೆ ಮನನೊಂದು ಯುವಕ ಆತ್ಮಹತ್ಯೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]