ಮುಂಬೈ: ಮಹಿಳೆಯೊಬ್ಬಳು ನಿರಂತರವಾಗಿ ಸೆಕ್ಸ್ ಗೆ ಒತ್ತಾಯಿಸುತ್ತಿದ್ದಳೆಂದು ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ನಡೆದಿದೆ.
ಸಚಿನ್ ಮಿಟ್ಕರಿ(38) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸಚಿನ್ ಪರ್ಭಾನಿಯ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದನು. ಇದೇ ಆಸ್ಪತ್ರೆಯಲ್ಲಿ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಸೆಕ್ಸ್ ಗೆ ನಿರಂತರವಾಗಿ ಒತ್ತಾಯಿಸುತ್ತಿದ್ದಳು. ಇದ್ದರಿಂದ ಬೇಸತ್ತ ಸಚಿನ್ ಭಾನುವಾರ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಸಚಿನ್ನನ್ನು ನೇಣು ಬಿಗಿದುಕೊಂಡಿದ್ದ ಸ್ಥಿತಿಯಲ್ಲಿ ನೋಡಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಪೊಲೀಸರು ಸ್ಥಳಕ್ಕೆ ಬಂದು ಸಚಿನ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಸಚಿನ ಮೃತಪಟ್ಟ ಜಾಗದಲ್ಲಿ ಒಂದು ಡೆತ್ನೋಟ್ ಪೊಲೀಸರಿಗೆ ಸಿಕ್ಕಿತ್ತು. ಅದರಲ್ಲಿ ಮಹಿಳೆಯೊಬ್ಬಳು ನನಗೆ ಮದುವೆಯಾಗಿದೆ ಎಂದು ತಿಳಿದರೂ, ನನ್ನೊಂದಿಗೆ ಸೆಕ್ಸ್ ಮಾಡುವಂತೆ ಒತ್ತಾಯಿಸುತ್ತಿದ್ದಳು. ನಾನು ನಿರಾಕರಿಸಿದ್ದಕ್ಕೆ ನನ್ನ ಮೇಲೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಬೆದರಿಕೆ ಹಾಕಿದ್ದಳು ಎಂದು ಸಚಿನ್ ಡೆತ್ನೋಟ್ನಲ್ಲಿ ಬರೆದಿದ್ದರು.
ಸದ್ಯ ಪೊಲೀಸರು ಮಹಿಳೆ ವಿರುದ್ಧ ಆತ್ಮಹತ್ಯೆಗೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv