ಮಂಗಳೂರು: ಪಿಸ್ತೂಲ್‍ನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು (Mangaluru) ಹೊರವಲಯದ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ.
ಗಾಯಾಳುವನ್ನು ಸಫ್ವಾನ್ (25) ಎಂದು ಗುರುತಿಸಲಾಗಿದೆ. ಸೆಕೆಂಡ್ ಹ್ಯಾಂಡ್ ವಸ್ತುಗಳ ಮಾರಾಟ ಮಳಿಗೆಯಲ್ಲಿ ಈ ಘಟನೆ ನಡೆದಿದೆ. ಪರವಾನಗಿ ಹೊಂದಿರುವ ಪಿಸ್ತೂಲ್‍ನಿಂದ ಗುಂಡು ಸಿಡಿದಿದೆ ಎಂದು ತಿಳಿದು ಬಂದಿದೆ. ಪಿಸ್ತೂಲ್ ಕ್ಲೀನ್ ಮಾಡುವಾಗ ಆಕಸ್ಮಿಕವಾಗಿ ಗುಂಡು ಹಾರಿದೆ ಎಂದು ಶಂಕಿಸಲಾಗಿದೆ.
Advertisement
Advertisement
ಗಂಭೀರವಾಗಿ ಗಾಯಗೊಂಡಿದ್ದ ಸಫ್ವಾನ್‍ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿ ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
Advertisement
Advertisement
ಈ ಸಂಬಂಧ ಪೊಲೀಸರು (Police) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.