ಮುಂಬೈ: ರಸ್ತೆಯಲ್ಲಿ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯರನ್ನು ತಡೆದು ಬಲವಂತವಾಗಿ ಪೋರ್ನ್ ವಿಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ 29 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಮುಂಬೈ ನಗರ ಸಮೀಪದ ಪನ್ವೆಲ್ ನಲ್ಲಿ ನಡೆದಿದೆ. ಆರೋಪಿಯನ್ನು ವಿಕೇಶ್ ಎಂದು ಗುರುತಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಯ ಸಹಾಯದಿಂದ ಪನ್ವೆಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಒಂದು ತಿಂಗಳ ಹಿಂದೆ ಪನ್ವೆಲ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯುವಕನೊಬ್ಬ ತನ್ನ ಮೊಬೈಲ್ ಫೋನಿನ ರಸ್ತೆಯಲ್ಲಿ ಹೋಗುತ್ತಿದ್ದ 10 ವರ್ಷದ ಅಪ್ರಾಪ್ತ ಬಾಲಕಿಗೆ ಅಶ್ಲೀಲ ವಿಡಿಯೋವನ್ನು ತೋರಿಸುತ್ತಿದ್ದನು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಆದರೆ ಪೊಲೀಸರು ಯಾವುದೇ ಕ್ರಮಕೈಗೊಂಡಿರಲಿಲ್ಲ. ನಂತರ ಫೆಬ್ರವರಿ ತಿಂಗಳಲ್ಲಿ ಇದೇ ರೀತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ದೂರು ಪನ್ವೆಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಎರಡನೇ ದೂರು ಸಲ್ಲಿಸಿದ ಬಳಿಕ ಪೊಲೀಸರು ಎಚ್ಚೆತ್ತುಕೊಂಡು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.
ಪೊಲೀಸರು ಆ ಪ್ರದೇಶದ ಸಿಸಿಟಿಯ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ. ಆಗ ಯುವಕನೊಬ್ಬ ತನ್ನ ಮೊಬೈಲ್ ಫೋನ್ ಬಳಸಿ ವಿಭಿನ್ನ ಸಮಯದಲ್ಲಿ ಇಬ್ಬರು ಅಪ್ರಾಪ್ತೆಯರಿಗೆ ಅಶ್ಲೀಲ ವಿಡಿಯೋವನ್ನು ತೋರಿಸುತ್ತಿದ್ದನು. ಬಳಿಕ ಪೊಲೀಸರು ಆತನಿಗಾಗಿ ಶೋಧ ಕಾರ್ಯವನ್ನು ನಡೆಸಿದ್ದಾರೆ. ಆರೋಪಿ ಎರಡು ಕೃತ್ಯಗಳಲ್ಲಿ ಒಂದೇ ರೀತಿಯ ಬಟ್ಟೆಗಳನ್ನು ಹಾಕಿದ್ದು, ಇದರಿಂದ ಆತನನ್ನು ಸುಲಭವಾಗಿ ಬಂಧಿಸಲು ಪೊಲೀಸರಿಗೆ ಸಹಾಯವಾಗಿದೆ.
ಆರೋಪಿ ವಿಕೇಶ್ ನಗರದ ತಾಲೋಜಾದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಸದ್ಯಕ್ಕೆ ವಿಚಾರಣೆ ನಡೆಸಲಾಗುತ್ತಿದೆ. ತನಿಖೆಯ ಸಂದರ್ಭದಲ್ಲಿ ಆರೋಪಿ ತನ್ನ ಮೊಬೈಲ್ ಫೋನಿನಲ್ಲಿ ಅಶ್ಲೀಲ ವಿಡಿಯೋಗಳನ್ನು ಇಟ್ಟುಕೊಂಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv