ಉಡುಪಿ: ಯುವಕನೊಬ್ಬ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸಿ ಕೊನೆಗೆ ಕೈಕೊಟ್ಟಿದ್ದಾನೆ. ಈ ಹಿನ್ನೆಲೆ ಯುವತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.
ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿದ ಯುವಕನೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಅಲ್ಲದೇ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಾಯಿಸಿ ಕೊನೆಗೆ ಕೈಕೊಟ್ಟು ಪರಾರಿಯಾಗಿದ್ದಾನೆ. ಈ ಹಿನ್ನೆಲೆ ಕುಂದಾಪುರದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರಸ್ತುತ ಯುವಕ ತಲೆಮರೆಸಿಕೊಂಡಿದ್ದಾನೆ. ಹಿಂದೂ ಸಂಘಟನೆಗಳು ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿದೆ. ಇದನ್ನೂ ಓದಿ: ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು – ಕ್ಲಾಸ್ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
Advertisement
Advertisement
ನಡೆದಿದ್ದೇನು?
ಕೋಟೇಶ್ವರದ ಅಜೀಜ್(32) ಮತ್ತು ಉಪ್ಪಿನಕುದ್ರು ಗ್ರಾಮದ ನಿವಾಸಿ ಶಿಲ್ಪಾ(25) ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಪ್ರೀತಿ-ಪ್ರೇಮ ಇಬ್ಬರ ನಡುವೆ ದೈಹಿಕ ಸಂಪರ್ಕಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಅಜೀಜ್, ಶಿಲ್ಪಾಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಾಯ ಮಾಡಿದ ಎಂದು ಶಿಲ್ಪಾ ಸಹೋದರ ರಾಘವೇಂದ್ರ ದೂರಿದ್ದಾರೆ.
Advertisement
ಶಿಲ್ಪಾಳನ್ನು ಪ್ರೀತಿಸುವ ನಾಟಕವಾಡಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈ ಕೃತ್ಯಕ್ಕೆ ಅಜೀಜ್‍ನ ಹೆಂಡತಿ ಸಲ್ಮಾ ತನ್ನ ಗಂಡನಿಗೆ ಸಹಾಯ ಮಾಡಿದ್ದಾಳೆ ಎಂದು ಹಿಂದೂ ಸಂಘಟನೆಗಳು ಆರೋಪ ಮಾಡಿದೆ. ಇದೇ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಕುಂದಾಪುರ ಪೆÇಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಶಿಲ್ಪಾ ಆತ್ಮಹತ್ಯೆ ಮಾಡಿಕೊಳ್ಳಲು ಅಜೀಜ್ ಪ್ರಚೋದನೆ ನೀಡಿದ್ದಾನೆ. ಈ ಹಿನ್ನೆಲೆ ಅವನನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
Advertisement
ಫ್ಲ್ಯಾಟಿಗೆ ಕರೆಸಿಕೊಳ್ಳುತ್ತಿದ್ದ ಅಜೀಜ್
ಮದುವೆಯಾಗಿ ಮಕ್ಕಳಿರುವ ಅಜೀಜ್ ಆಗಾಗ ತನ್ನ ಫ್ಲ್ಯಾಟಿಗೆ ಶಿಲ್ಪಾಳನ್ನು ಕರೆಸಿಕೊಳ್ಳುತ್ತಿದ್ದ. ಈ ವೇಳೆ ಶಿಲ್ಪಾಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಸಂಘಟನೆಗಳು ದೂರಿದೆ. ಕುಂದಾಪುರದ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಶಿಲ್ಪಾಳನ್ನು ಅಜೀಜ್ ಪ್ರೀತಿಯ ಹೆಸರಲ್ಲಿ ನಂಬಿಸಿದ್ದಾನೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗಬೇಕು ಎಂದು ನಿರಂತರ ಕಿರುಕುಳ ನೀಡುತ್ತಿದ್ದ ಎಂದು ಸಹೋದರನ ಜೊತೆ ಶಿಲ್ಪಾ ಆಸ್ಪತ್ರೆಯಲ್ಲಿ ಹೇಳಿಕೊಂಡಿದ್ದಾಳೆ.
ಮತಾಂತರವಾಗಲು ಒಪ್ಪದೇ ಇದ್ದಾಗ ನೀನು ಎಲ್ಲಾದರೂ ಹೋಗಿ ಸಾಯಿ ಎಂದು ಬೈದಿದ್ದ ಎನ್ನಲಾಗಿದೆ ಎಂದು ಶಿಲ್ಪಾಳ ಸಹೋದರ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ ಶಿಲ್ಪಾ ಮತ್ತು ಅಜೀಜ್ ನಡುವಿನ ಸಂಭಾಷಣೆಯ ಫೋಟೋ, ಅವರಿಬ್ಬರೂ ಬಹಳ ಆತ್ಮೀಯವಾಗಿದ್ದ ಫೋಟೋಗಳು ಲಭ್ಯವಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಇನ್ಮುಂದೆ ಸಿಗುತ್ತೆ ಇಳಕಲ್ ಸೀರೆ
ಅಜೀಜ್ ಅಕ್ರಮ ದನಸಾಗಾಟ ಪಡಿತರ ಅಕ್ಕಿ ಸಾಗಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬ ಆರೋಪ ಸಹ ಕೇಳಿಬರುತ್ತಿದೆ. ಪರಿಣಾಮ ಕುಂದಾಪುರ ಪೊಲೀಸರು ಮೂರು ತಂಡಗಳನ್ನು ರಚಿಸಿ ಆರೋಪಿಯ ಪತ್ತೆಗೆ ಹುಡುಕಾಟ ಮಾಡುತ್ತಿದ್ದಾರೆ.