ಬೆಂಗಳೂರು: ಭಾನುವಾರ ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ (Man) ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಮಣಿಪಾಲ್ ಕೌಂಟಿ ರಸ್ತೆಯಲ್ಲಿ (Manipal County Road) ನಡೆದಿದೆ.
ಬಸಾಪುರ ನಿವಾಸಿ ನಾರಾಯಣಪ್ಪ (56) ಮೃತ ದುರ್ದೈವಿ. ನಾರಾಯಣಪ್ಪ ಮುಂಜಾನೆ 5 ಗಂಟೆಗೆ ಮನೆಯಿಂದ ತೆರಳಿದ್ದರು. ಬಳಿಕ ಸ್ವಿಫ್ಟ್ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಾರಿನಲ್ಲಿದ್ದ ಶವವನ್ನು ನೋಡಿ ಸಾರ್ವಜನಿಕರು ಪೋಲಿಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಇದನ್ನೂ ಓದಿ: ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ
ಮುಖ ಮತ್ತು ಎದೆಯ ಭಾಗಕ್ಕೆ ಗಾಯಗಳಾಗಿರುವ ಸ್ಥಿತಿಯಲ್ಲಿ ನಾರಾಯಣಪ್ಪ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪರಿಶೀಲನೆ ನಡೆಸಿ ಕುಟುಂಬಸ್ಥರಿಗೆ ಮಾಹಿತಿ ತಿಳಿಸಿದ್ದಾರೆ. ಕೊಲೆ ಮಾಡಿ ಕಾರಿನಲ್ಲಿಟ್ಟು ರಸ್ತೆಯಲ್ಲಿ ಬಿಟ್ಟುಹೋಗಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹಣ ಕಾಸಿನ ವ್ಯಹಾರಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಮೃತ ದೇಹವನ್ನು ಮರಣೋತ್ತರ ಪರಿಕ್ಷೆಗೆ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ – 50 ಜನರಿಗೆ ಕೃಪಾಲನಿ ಬ್ಲ್ಯಾಕ್‌ಮೇಲ್

