– ಕೆಲ ವ್ಯಕ್ತಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಆರೋಪ
– ವಿಡಿಯೋದಲ್ಲಿ ಸಾವಿನ ಕಾರಣವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ವ್ಯಕ್ತಿ
ಆನೇಕಲ್: ವ್ಯಕ್ತಿಯೊಬ್ಬರು ಫೇಸ್ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ಪಟ್ಟಣದ ಖಾಸಗಿ ಶಾಲೆ ಬಳಿ ನಡೆದಿದೆ.
ಪ್ರವೀಣ್ ಗೌಡ ಬೇಲೂರು (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ಪ್ರವೀಣ್ ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಕೆಲ ವ್ಯಕ್ತಿಗಳ ಟಾರ್ಚರ್‌ನಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಯುವಕ ಅರೆಸ್ಟ್
ಬಿಜೆಪಿ ಕಾರ್ಯಕರ್ತನಾಗಿದ್ದ ಪ್ರವೀಣ್ ಗೌಡ ಬೇಲೂರು, ಫೇಸ್ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಸಾವಿಗೆ ಕಾರಣ ಏನು ಅನ್ನೋದನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕಳೆದ ಎರಡು ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ಕೆಲವರು ನೇರ ಕಾರಣರಾಗಿದ್ದಾರೆ. ಸಮಂದರ್ ಕಿರಣ್, ಗೋಕುಲ್ ಫ್ಯಾಷನ್ ಹರೀಶ್, ಭಾಸ್ಕರ್ ನಾರಾಯಣಪ್ಪ, ದೊಡ್ಡಹಾಗಡೆ ಮಧುಗೌಡ ಜೊತೆಗೆ ಸರವಣ ಇವರೆಲ್ಲಾ ನನ್ನ ಸಾವಿಗೆ ಕಾರಣಕರ್ತರು ಎಂದು ವೀಡಿಯೋದಲ್ಲಿ ಆರೋಪಿಸಿದ್ದಾರೆ.
ಪೊಲೀಸರು, ಯಾರನ್ನೂ ಬಿಟ್ಟರೂ ಕಿರಣ್ ಗೌಡನನ್ನು ದಯವಿಟ್ಟು ಬಿಡಬೇಡಿ. ಕಿರಣ್ ತುಂಬಾ ಹೆಣ್ಣುಮಕ್ಕಳಿಗೆ ಫೋನ್ ಮಾಡಿ ಟಾರ್ಚರ್ ಕೊಡುತ್ತಾನೆ. ಇವನು ಮಾಡಿರುವ ಇಂತಹ ಕೆಲಸಗಳೆಲ್ಲಾ ನನ್ನ ಮೇಲೆ ಬಂದಿದೆ ಎಂದಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಕ್ಷಣ; ಯುನೆಸ್ಕೋದ ʻಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್ʼಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ
ಹಣದ ಮಾತುಕತೆಗೆ ಕರೆದು ಹಲ್ಲೆ ನಡೆಸಿರುವ ಬಗ್ಗೆಯೂ ವಿಡಿಯೋದಲ್ಲಿ ಆರೋಪಿಸಿದ್ದಾರೆ. ಆನೇಕಲ್ ಬಿಜೆಪಿ ಮಂಡಲದ ಅಧ್ಯಕ್ಷ ನಾಯನಹಳ್ಳಿ ಮುನಿರಾಜು ಗೌಡ ಅವರು ಹಣದ ಮಾತುಕತೆಗೆ ಮನೆ ಕರೆದಿದ್ದರು. ಆ ವೇಳೆ ಅಲ್ಲಿ ಆನೇಕಲ್ ಕೌನ್ಸಿಲರ್ ಭಾಗ್ಯಮ್ಮ ಮತ್ತು ಅವರ ಪತಿ ಶ್ರೀನಿವಾಸ್ ಸಹ ಇದ್ದರು. ಭಾಗ್ಯಮ್ಮ ಶ್ರೀನಿವಾಸ್ ಏಕಾಏಕಿ ಹತ್ತಾರು ಮಂದಿಯನ್ನ ಕರೆಸಿ, ಮೊಬೈಲ್ ಕಿತ್ತುಕೊಂಡು 2 ಗಂಟೆಗಳ ಕಾಲ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸುಂಕ ಸಮರದ ನಡುವೆ ಯುಎಸ್ ಅಧ್ಯಕ್ಷರನ್ನ ಭೇಟಿಯಾದ ಇಟಲಿ ಪ್ರಧಾನಿ – ಮೆಲೊನಿ ಶ್ರೇಷ್ಠ ಪ್ರಧಾನಿ ಎಂದ ಟ್ರಂಪ್
ಅವರು ಮನಸೋ ಇಚ್ಛೆ ನನ್ನ ಮೇಲೆ ಹಲ್ಲೆ ನಡೆಸಿದ್ದು, ನಾನು ಸತ್ತ ಮೇಲೆ ನನ್ನ ದೇಹದ ಮೇಲಿರುವ ಗಾಯದ ಗುರುತನ್ನ ಪರಿಶೀಲಿಸಬೇಕು. ಪೊಲೀಸರು ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿಕೊಂಡು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ವಿಡಿಯೋವನ್ನ ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿ, ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು (Anekal Police) ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಲಾಂಗ್ ಹಿಡಿದು ಸಿಕ್ಕ ಸಿಕ್ಕ ವಾಹನದ ಗ್ಲಾಸ್ ಹೊಡೆದ ಪುಡಿ ರೌಡಿ!
ಆತ್ಮಹತ್ಯೆಗೆ ಶರಣಾದ ಪ್ರವೀಣ್ ಅವರ ಸಹೋದರಿ ಸೌಮ್ಯ ಮಾತನಾಡಿ, ಶ್ವೇತಾ ಎಂಬಾಕೆಗೆ ಪ್ರವೀಣ್ ಸಾಲ ನೀಡಿದ್ದ. ಬಳಿಕ ಶ್ವೇತಾಗೆ ಹಣ ವಾಪಸ್ ಮಾಡುವಂತೆ ಕೇಳಿದ್ದ. ಸಾಕಷ್ಟು ದಿನವಾದರೂ ಹಣ ನೀಡದೇ ಇದ್ದಾಗ ಮನೆ ಬಳಿ ಹೋಗಿ ಪ್ರವೀಣ್ ಕೇಳಿದ್ದ. ಶ್ವೇತಾ ಸಂಬಂಧಿಯಾಗಿದ್ದ ಪುರಸಭೆ ಸದಸ್ಯೆ ಭಾಗ್ಯಮ್ಮ ಶ್ರೀನಿವಾಸ್ ದುಡ್ಡಿನ ವಿಚಾರವಾಗಿ ಬಿಜೆಪಿ ಮುಖಂಡ ನಾಯನಹಳ್ಳಿ ಮುನಿರಾಜು ಗೌಡ ಮನೆಯಲ್ಲಿ ಮಾತುಕತೆಗೆ ಕರೆದಿದ್ದರು. ಈ ವೇಳೆ ಶ್ವೇತಾ ಕಡೆಯ ಇಪ್ಪತ್ತಕ್ಕೂ ಹೆಚ್ಚು ಮಂದಿ ಪ್ರವೀಣ್ ಫೋನ್ ಕಿತ್ತುಕೊಂಡು ಹಲ್ಲೆ ಮಾಡಿದ್ದರು ಎಂದು ಬಿಜೆಪಿ ಮುಖಂಡ ಮುನಿರಾಜು ಗೌಡ, ಶ್ರೀನಿವಾಸ್, ಪುರಸಭೆ ಸದಸ್ಯೆ ಭಾಗ್ಯಮ್ಮ ಮೇಲೆ ಆರೋಪಿಸಿದ್ದಾರೆ. ಇದನ್ನೂ ಓದಿ: ರಾಯಚೂರು | ಭೀಕರ ಅಪಘಾತಕ್ಕೆ ನಾಲ್ವರು ಬಲಿ
ಶ್ವೇತಾ ಸ್ನೇಹಿತ ಕಿರಣ್ ಕೂಡ ಪ್ರವೀಣ್‌ಗೆ ಪೋನ್ ಮಾಡಿ ಅವಾಜ್ ಹಾಕಿದ್ದ. ಶ್ವೇತಾ ವಿಚಾರಕ್ಕೆ ಬಾರದಂತೆ ಕಿರಣ್ ಗೌಡ, ಹರೀಶ್, ಭಾಸ್ಕರ್ ನಾರಾಯಣಪ್ಪ, ಮಧುಗೌಡ, ಸರವಣ ಸೇರಿ ಪ್ರವೀಣ್‌ಗೆ ಟಾರ್ಚರ್ ನೀಡುತ್ತಿದ್ದರು. ಇದೇ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡುತ್ತಿದ್ದೇವೆ ಎಂದು ಹೇಳಿದರು.