ರಾಯಚೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ (Prayagraj) ನಡೆಯುತ್ತಿರುವ ಕುಂಭಮೇಳಕ್ಕೆ (Kumb Mela) ಹೋಗಿದ್ದ ರಾಯಚೂರಿನ (Raichuru) ವ್ಯಕ್ತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮಹಾದೇವ ವಾಲೇಕರ್ (48) ಮೃತ ದುರ್ದೈವಿ. ಮಧ್ಯಪ್ರದೇಶದ (Madhya Pradesh) ಮೇಹೂರ್ ಬಳಿ ಕಾರು ಇವರಿಗೆ ಡಿಕ್ಕಿ ಹೊಡೆದಿದ್ದರಿಂದ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಧಾರ್ಮಿಕ ವಿಚಾರದಲ್ಲೂ ರಾಜಕಾರಣ ಮಾಡುವವರು ನಿಜವಾದ ಹಿಂದೂಗಳಲ್ಲ: ಪ್ರಕಾಶ್ ರಾಜ್
ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಮದ ನಿವಾಸಿಯಾಗಿದ್ದ ಮಹಾದೇವ ಕುಟುಂಬ ಸ್ನೇಹಿತರೊಂದಿಗೆ ಪ್ರಯಾಗ್‌ರಾಜ್ ಕುಂಭಮೇಳದಿಂದ ವಾಪಸ್ ಊರು ಕಡೆ ಬರುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ.
ಮಹಾದೇವ ವಾಲೇಕರ್ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿ ನಿಂತಿತ್ತು. ಕಾರಿನಲ್ಲಿದ್ದವರು ಕೆಳಗಡೆ ಇಳಿದಿದ್ದರು. ಈ ವೇಳೆ ರಸ್ತೆ ಬದಿ ನಿಂತಿದ್ದ ಮಹಾದೇವ ಮೇಲೆ ಹೈದರಾಬಾದ್ ಮೂಲದ ಕಾರು ಹರಿದಿದೆ.
ಅಪಘಾತ ಬಳಿಕ ಮಹಾದೇವ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹೈದರಾಬಾದ್ ಮೂಲದ ಕಾರನ್ನು ಸ್ಥಳೀಯ ಪೊಲೀಸರು ಜಪ್ತಿ ಮಾಡಿದ್ದಾರೆ.