ಬೆಂಗಳೂರು: ಚೀಟಿ ಹಣದಲ್ಲಿ (Voucher Money) ಮೋಸ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವ ಚಿಟ್ ಫಂಡ್ ಡೆವಲಪ್ಮೆಂಟ್ ಆಫೀಸರ್‌ನನ್ನು ಭೀಕರವಾಗಿ ಹತ್ಯೆಗೈದು ತುಂಡುತುಂಡಾಗಿ ಕತ್ತರಿಸಿದ ಘಟನೆ ಬೆಂಗಳೂರಿನ (Bengaluru) ರಾಮಮೂರ್ತಿ ನಗರ (Ramamurthy Nagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೆ.ವಿ.ಶ್ರೀನಾಥ್ (34) ಕೊಲೆಯಾದ ವ್ಯಕ್ತಿ. ಮಾಧವ ರಾವ್ ಕೊಲೆ ಆರೋಪಿ. ಐದು ಲಕ್ಷ ಚೀಟಿ ಹಣ ಮೋಸ ಮಾಡಿದ ಆರೋಪದಲ್ಲಿ ಕೊಲೆ ಮಾಡಲಾಗಿದೆ. ಮೇ 28ರ ಬೆಳಗ್ಗೆ ಮನೆಯಿಂದ ಹೊರಹೋಗಿದ್ದ ಶ್ರೀನಾಥ್ ಮನೆಗೆ ವಾಪಸ್ ಆಗಿರಲಿಲ್ಲ. ಮೇ 29ರಂದು ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಪತ್ನಿ ದೂರು ನೀಡಿದ್ದರು. ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಶ್ರೀನಾಥ್ ಮಾಧವ ರಾವ್ ಮನೆಗೆ ಹೋಗಿರೋದು ಪತ್ತೆಯಾಗಿತ್ತು. ಕೆ.ಆರ್.ಪುರಂನ ವಿಜಿನಪುರದಲ್ಲಿರುವ ಮಾಧವ ರಾವ್ ಮನೆಗೆ ಶ್ರೀನಾಥ್ ಹೋಗಿರೋದು ಪತ್ತೆಯಾಗಿದೆ. ಮನೆಯ ಸಿಸಿಟಿವಿಯಲ್ಲಿ ಮಾಧವ ರಾವ್ ಮನೆಗೆ ಶ್ರೀನಾಥ್ ಎಂಟ್ರಿ ಆಗಿರುವುದು ಕೂಡ ಪತ್ತೆಯಾಗಿದೆ. ಆದರೆ ಶ್ರೀನಾಥ್ ಮನೆಯಿಂದ ಹೊರಗೆ ಹೋಗುವುದು ರೆಕಾರ್ಡ್ ಆಗಿರಲಿಲ್ಲ. ಜೊತೆಗೆ ಮನೆಯ ಒಳಗಡೆ ಪರಿಶೀಲನೆ ಮಾಡಿದಾಗ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇದರಿಂದ ಮಾಧವ ರಾವ್ ಬಗ್ಗೆ ವಿಚಾರಿಸಿದಾಗ ಆತನೂ ನಾಪತ್ತೆಯಾಗಿದ್ದ. ಬಳಿಕ ಆಂಧ್ರಪ್ರದೇಶದಲ್ಲಿ ಮಾಧವ ರಾವ್ ಪತ್ತೆ ಮಾಡಿ ಕರೆತಂದು ವಿಚಾರಣೆ ನಡೆಸಿದ ವೇಳೆ ಮಾಧವ ರಾವ್ ಅಸಲಿ ಕಥೆ ತೆರೆದಿಟ್ಟಿದ್ದಾನೆ. ಇದನ್ನೂ ಓದಿ: ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆಯೂ ಮೋದಿ ಪ್ರಮಾಣವಚನಕ್ಕೆ ಮಾಲ್ಡೀವ್ಸ್ ಅಧ್ಯಕ್ಷರಿಗೆ ಆಹ್ವಾನ
ಮಾಧವ ರಾವ್ ಮತ್ತು ಶ್ರೀನಾಥ್‌ಗೆ ಎರಡು ವರ್ಷದಿಂದ ಪರಿಚಯ ಇತ್ತು. ಶ್ರೀನಾಥ್ ಬಳಿ ಮಾಧವ ರಾವ್ 5 ಲಕ್ಷ ರೂ. ಹಣದ ಚೀಟಿ ಹಾಕಿದ್ದ. ಈ ಚೀಟಿ ಹಣದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗುತ್ತಿತ್ತು. ಚೀಟಿ ಹಣ ವಾಪಸ್ ಕೊಡುವಂತೆ ಶ್ರೀನಾಥ್ ಒತ್ತಾಯ ಮಾಡುತ್ತಿದ್ದ. ಅಷ್ಟಲ್ಲದೇ ಮಾಧವ ರಾವ್ ಪತ್ನಿ ಜೊತೆ ಶ್ರೀನಾಥ್‌ಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಹೀಗಿರುವಾಗ ಮೇ 28ರಂದು ಬೆಳಗ್ಗೆ ಮಾಧವ ರಾವ್ ಮನೆಗೆ ಶ್ರೀನಾಥ್ ಬಂದಿದ್ದ. ಈ ವೇಳೆ ಮನೆಯಲ್ಲಿ ಇಬ್ಬರಿಗೂ ಹಣದ ವಿಚಾರಕ್ಕೆ ಗಲಾಟೆ ಆಗಿದೆ. ಬಳಿಕ ಮಾಧವ ರಾವ್ ಮನೆಯಲ್ಲಿದ್ದ ಜಾಕ್ ರಾಡ್‌ನಿಂದ ಶ್ರೀನಾಥ್ ತಲೆಗೆ ಹೊಡೆದಿದ್ದಾನೆ. ಇದರಿಂದ ಕುಸಿದು ಬಿದ್ದ ಶ್ರೀನಾಥ್ ದೇಹವನ್ನು ಮಾಧವ ರಾವ್ ಮಚ್ಚಿನಿಂದ ತುಂಡು ತುಂಡಾಗಿ ಕತ್ತರಿಸಿದ್ದಾನೆ. ಬಳಿಕ ಸಾಕ್ಷಿ ನಾಶ ಮಾಡಲು ಶ್ರೀನಾಥ್ ಮೃತದೇಹವನ್ನು ಮೂರು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ. ಮೊದಲಿಗೆ ಒಂದು ಬ್ಯಾಗ್ ನಂತರ ಎರಡು ಬ್ಯಾಗ್‌ಗಳಲ್ಲಿ ಮೃತದೇಹದ ತುಂಡುಗಳನ್ನು ಬೆಳತ್ತೂರು ಬಳಿಯ ಮೋರಿಯಲ್ಲಿ (ಪಿನಾಕಿನಿ ನದಿ) ಹಾಕಿದ್ದ. ನಂತರ ತನ್ನ ಮೊಬೈಲ್ ಸ್ವಿಚ್ಡ್ಆಫ್ ಮಾಡಿ ಮಾಧವ ರಾವ್ ಆಂಧ್ರಪ್ರದೇಶಕ್ಕೆ ಎಸ್ಕೇಪ್ ಆಗಿದ್ದ. ಇದನ್ನೂ ಓದಿ: ಚಂದನ್- ನಿವೇದಿತಾ ವಿಚ್ಚೇದನಕ್ಕೆ ನಿಜವಾದ ಕಾರಣ ರಿವೀಲ್!
ಸದ್ಯ ಪ್ರಕರಣ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದು, ಕೊಲೆಯಾದ ಮೃತದೇಹಕ್ಕಾಗಿ ಪಿನಾಕಿನಿ ನದಿ ಮೋರಿಯಲ್ಲಿ ಹುಡುಕಾಟ ನಡೆಯುತ್ತಿದೆ. ಇದನ್ನೂ ಓದಿ: ಹೊಳೆನರಸೀಪುರದ ಪ್ರಜ್ವಲ್ ನಿವಾಸದಲ್ಲಿ ಎಸ್‍ಐಟಿಯಿಂದ ಸ್ಥಳ ಮಹಜರು