ಹುಬ್ಬಳ್ಳಿ: ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದ ಘಟನೆ ಹುಬ್ಬಳ್ಳಿಯ (Hubballi) ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ.
ನಗರದ ಸಿದ್ದೇಶ್ವರ ಪಾರ್ಕ್ ಬಳಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಬಳಿಕ ಜನರ ಎದುರೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹತ್ಯೆಯಾದ ವ್ಯಕ್ತಿಯ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಇದನ್ನೂ ಓದಿ: ಧಾರವಾಡ | ಪತ್ನಿ ಕೊಂದು ತಾನೂ ನೇಣಿಗೆ ಶರಣಾದ ಪತಿ
ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹತ್ಯೆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಕೊಲೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಹತ್ಯೆಯಾದ ವ್ಯಕ್ತಿ ಬಗ್ಗೆಯೂ ಮಾಹಿತಿ ಗೊತ್ತಾಗಿಲ್ಲ ಎಂದಿದ್ದಾರೆ.
ಈ ಬಗ್ಗೆ ಯಾರಾದರೂ ಪ್ರಕರಣ ದಾಖಲಿಸಿದರೆ ದಾಖಲು ಮಾಡಿಕೊಳ್ಳಲಾಗುವುದು. ಇಲ್ಲದೇ ಹೋದಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು. ಆರೋಪಿಗಳ ಬಗ್ಗೆ ಹಾಗೂ ಹತ್ಯೆಯಾದ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೆಂಡತಿ ಮೇಲಿನ ಕೋಪಕ್ಕೆ ಮಗುವನ್ನು ನದಿಗೆಸೆದು ಕೊಂದ ಪಾಪಿ ತಂದೆ
