ಮೈಸೂರು: ಇಲ್ಲಿನ (Mysuru) ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್ (Apartment) ಒಂದರಲ್ಲಿ ನಾಲ್ವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್ ಪತ್ತೆಯಾಗಿದೆ.
ಡೆತ್‌ನೋಟ್‌ನಲ್ಲಿ ನಮ್ಮ ಸಾವಿಗೆ ನಾವೇ ಕಾರಣ. ಹಣಕಾಸಿನ ಸಮಸ್ಯೆಯಿಂದಾಗಿ ನಾವು ಸಾಯುತ್ತಿದ್ದೇವೆ. ನಮ್ಮ ಸಾವಿಗೆ ಬೇರೆ ಯಾರು ಕಾರಣರಲ್ಲ. ನನ್ನ ಸ್ನೇಹಿತರಿಗೆ, ಸಂಬಂಧಿಕರಿಗೆ ಯಾರು ತೊಂದರೆ ಕೊಡಬೇಡಿ. ನಮ್ಮನ್ನ ಕ್ಷಮಿಸಿಬಿಡಿ, ಐ ಆಮ್ ಸಾರಿ ಎಂದು ಬರೆಯಲಾಗಿದೆ. ಇದನ್ನೂ ಓದಿ: ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ ನಾಲ್ವರ ಶವ – ಪತ್ನಿ, ಮಕ್ಕಳಿಗೆ ವಿಷ ನೀಡಿ ನೇಣಿಗೆ ವ್ಯಕ್ತಿ ಶರಣು!
Advertisement
ಅಪಾರ್ಟ್‍ಮೆಂಟ್‍ನಲ್ಲಿ ಚೇತನ್ (45), ರೂಪಾಲಿ (43), ಪ್ರಿಯಂವದ ಮತ್ತು ಕುಶಾಲ್ (15) ಶವ ಪತ್ತೆಯಾಗಿತ್ತು. ಚೇತನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಹಾಗೂ ಉಳಿದವರ ಮೃತದೇಹಗಳು ಅಪಾರ್ಟ್‍ಮೆಂಟ್‍ನಲ್ಲಿ ಪತ್ತೆಯಾಗಿತ್ತು.
Advertisement
Advertisement
ಮೃತ ಚೇತನ್ ಅಣ್ಣ, ಚೇತನ್ ಹೆಂಡತಿಯ ಅಪ್ಪ ಅಮ್ಮನಿಗೆ ಇಂದು (ಫೆ.17) ಬೆಳ್ಳಗಿನ ಜಾವ ಕರೆ ಮಾಡಿ, ಅಪಾರ್ಟ್‌ಮೆಂಟ್ ಬಳಿಗೆ ಹೋಗಲು ಹೇಳಿದ್ದಾರೆ. ಅವರು ಬಂದು ನೋಡಿದಾಗ ವಿಚಾರ ಗೊತ್ತಾಗಿದೆ. ಭಾನುವಾರ ಸಂಜೆ ಚೇತನ್ ಕುಟುಂಬ ದೇವಸ್ಥಾನಕ್ಕೆ ಹೋಗಿ ಮನೆಗೆ ಮರಳಿದ್ದನ್ನು ಕೆಲವರು ನೋಡಿದ್ದರು.
Advertisement
ಈ ಬಗ್ಗೆ ಪ್ರತಿಕ್ರಿಯಿಸಿರುವ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ನಾಲ್ಕು ಜನರ ಸಾವಾಗಿದೆ. ಅವರು 2 ಅಪಾರ್ಟ್‌ಮೆಂಟ್‌ನಲ್ಲಿದ್ದರು. ಸೌದಿಗೆ ಕಾರ್ಮಿಕರನ್ನು ಕಳುಹಿಸುವ ಕೆಲಸವನ್ನು ಚೇತನ್ ಮಾಡುತ್ತಿದ್ದರು. 2019 ರಲ್ಲಿ ಅಪಾರ್ಟ್‌ಮೆಂಟ್ ಖರೀದಿಸಿದ್ದರು. ಮಗ 10 ನೇ ತರಗತಿ ಓದುತ್ತಿದ್ದ. ಚೇತನ್ ಅಣ್ಣ ವಿದೇಶದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು – ಮಂಗಳೂರು ಹೈವೇಯಲ್ಲಿ ಸರಣಿ ಅಪಘಾತ; 7 ಕಾರುಗಳು ಜಖಂ