ಗುವಾಹಟಿ: ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುವಾಹಟಿಯಲ್ಲಿ (Guwahati) ನಡೆದಿದೆ. ಆತನ ಲಿವ್ ಇನ್ ಗೆಳತಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡಿದ್ದಾರೆ.
ನವಜ್ಯೋತಿ ತಾಲ್ಲೂಕುದಾರ್ ಎಂದು ಗುರುತಿಸಲಾದ ವ್ಯಕ್ತಿ ಒಂದು ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಆತನ ಸಂಗಾತಿ ಸುಷ್ಮಿತಾ ದಾಸ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹಯಾತ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ | ರಕ್ತದ ಕಲೆ ಕಂಡುಬಂದಿದ್ದಕ್ಕೆ ಬಲವಂತವಾಗಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್
ಕಳೆದ ಒಂದು ವರ್ಷದಿಂದ ಇಬ್ಬರೂ ವ್ಯಕ್ತಿಗಳು ಲಿವ್-ಇನ್ ಸಂಬಂಧದಲ್ಲಿದ್ದರು. ಆದರೆ, ಇತ್ತೀಚೆಗೆ ಅವರ ನಡುವಿನ ಜಗಳ ಹೆಚ್ಚಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರ ನಡುವೆ ಆಗಾಗ್ಗೆ ಜಗಳ, ತಪ್ಪುಗ್ರಹಿಕೆಗಳು ಹೆಚ್ಚಾಗಿತ್ತು.
ಆ ವ್ಯಕ್ತಿ ಸುಶ್ಮಿತಾಳನ್ನು ಒಂದು ಕೋಣೆಯಲ್ಲಿ ಕೂಡಿಹಾಕಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಶ್ಮಿತಾ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡು ಶಾಲಾ ವಾಹನ ದುರಂತ – ರೈಲ್ವೇ ಕ್ರಾಸಿಂಗ್ ಸುರಕ್ಷತೆ ಹೆಚ್ಚಿಸಲು ಮುಂದಾದ ಇಲಾಖೆ
ಆ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಹಿಳೆ ತುರ್ತು ಕರೆ ಮಾಡಿದರು. ನಾವು ತಕ್ಷಣ ಸ್ಥಳಕ್ಕೆ ಧಾವಿಸಿದೆವು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸುಷ್ಮಿತಾ ದಾಸ್ ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಾವು ನಮ್ಮ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಗುವಾಹಟಿ ಪೊಲೀಸರು ತಿಳಿಸಿದ್ದಾರೆ.