ಹೈದರಾಬಾದ್: 12 ವರ್ಷದ ಬಾಲಕಿಯ ಮೇಲೆ ಮೂವರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಕೃಷ್ಣ ಜಿಲ್ಲೆಯ ಜಗ್ಗಯ್ಯಪೇಟ್ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತೊರಗಾಂಡಪಾಲೇಮ್ ಗ್ರಾಮದ ಸ್ಥಳೀಯ ಸರ್ಕಾರಿ ಕಚೇರಿಯ ಹಿಂಭಾಗದ ಕಟ್ಟಡದಲ್ಲಿ ಅಪ್ರಾಪ್ತೆಯ ಮೇಲೆ ಮೂವರು ಕಾಮುಕರು ಸೆಪ್ಟೆಂಬರ್ ಕೊನೆಯ ವಾರದಲ್ಲಿ ಅತ್ಯಾಚಾರ ಎಸಗಿದ್ದರು.
ಈ ಘಟನೆಯಿಂದ ಬಾಲಕಿ ಆಘಾತಕ್ಕೆ ಒಳಗಾಗಿ ಕಳೆದ ವಾರ ಈ ವಿಚಾರವನ್ನು ಪೋಷಕರಿಗೆ ತಿಳಿಸಿದ್ದಳು. ಭಾನುವಾರ ಆರೋಪಿಗಳ ವಿರುದ್ಧ ಜಗ್ಗಯ್ಯಪೇಟ್ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದಾರೆ ಎಂದು ಇನ್ಸ್ ಪೆಕ್ಟರ್ ಎಸ್. ಶ್ರೀಕುಮಾರ್ ಹೇಳಿದ್ದಾರೆ.
ಈ ಪ್ರಕರಣದ ಸಂಬಂಧ ಆರೋಪಿಗಳಲ್ಲಿ ಓರ್ವನನ್ನು ಬಂಧಿಸಲಾಗಿದೆ. ಇನ್ನುಳಿದ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರಿಗೆ ಜಾಲ ಬೀಸಿದ್ದೇವೆ ಎಂದು ಪೋಲಿಸರು ತಿಳಿಸಿದ್ದಾರೆ.
ಇದನ್ನು ಓದಿ: ಹಾಡಹಗಲೇ ಫುಟ್ ಪಾತ್‍ನಲ್ಲೇ ರೇಪ್- ಸಹಾಯಕ್ಕೆ ಯಾರು ಬರಲಿಲ್ಲ ಆದ್ರೆ ವಿಡಿಯೋ ಮಾಡಿದ್ರು