ಮೈಸೂರು: ಒಂಟಿ ಮಹಿಳೆಯನ್ನು ಟಾರ್ಗೆಟ್ ಮಾಡಿ ಸರಗಳ್ಳತನಕ್ಕೆ ಯತ್ನಿಸಿದ ಕದೀಮನನ್ನು ಸಾರ್ವಜನಿಕರೇ ಪೊಲೀಸರಿಗೆ ಹಿಡಿದುಕೊಟ್ಟಿರುವ ಘಟನೆ ನಗರದ ಹೊಸಕೇರಿಯಲ್ಲಿ ನಡೆದಿದೆ.
ರಂಗನಾಥ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ. ಮೈಸೂರಿನ ಹೊಸಕೇರಿ 5ನೇ ಕ್ರಾಸಿನಲ್ಲಿರುವ ಮನೆಯಲ್ಲಿ ಮಹಿಳೆಯೊಬ್ಬರು ಒಂಟಿಯಾಗಿರುವುದನ್ನು ಗಮನಿಸಿದ ರಂಗನಾಥ್ ಮನೆಗೆ ನುಗ್ಗಿ ಸರಗಳ್ಳತನಕ್ಕೆ ಯತ್ನಿಸಿದ್ದಾನೆ. ಅಪರಿಚಿತ ವ್ಯಕ್ತಿ ದಿಢೀರನೆ ಮನೆಯೊಳಗೆ ಬಂದ ಕಾರಣ ಮಹಿಳೆ ಸಹಾಯಕ್ಕಾಗಿ ಜೋರಾಗಿ ಕಿರುಚಿಕೊಂಡಿದ್ದಾರೆ.
ಮನೆಯಲ್ಲಿದ್ದ ಮಹಿಳೆ ಕಿರುಚಿಕೊಂಡಿದ್ದನ್ನು ಗಮನಿಸಿದ ಸಾರ್ವಜನಿಕರು ಮನೆಯತ್ತ ಓಡಿ ಬಂದಿದ್ದರು. ಇದನ್ನು ಗಮನಿಸಿದ ಕಳ್ಳ ಮನೆಯಿಂದ ಓಡಿ ಹೋಗಲು ಯತ್ನಿಸಿದ್ದು, ಸ್ಥಳೀಯ ಯುವಕರು ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಆ ಬಳಿಕ ಕೆ.ಆರ್.ಠಾಣೆ ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಆರೋಪಿ ರಂಗನಾಥ್‍ನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.