ಕಾರವಾರ: ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) ಕಾಂಗ್ರೆಸ್ (Congress) ಭರ್ಜರಿಯಾಗಿ ಜಯಗಳಿಸಿದ್ದು, ಇದರ ಬೆನ್ನಲ್ಲೇ ಕೇಸರಿ ಬಾವುಟದ ಪಕ್ಕ ಇಸ್ಲಾಂ ಬಾವುಟ ಹಾರಿಸಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkala) ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಕ್ಕಿದ್ದು, ಅಭ್ಯರ್ಥಿ ಮಂಕಾಳು ವೈದ್ಯರಿಗೆ ಗೆಲುವಾಗಿದೆ. ಹೀಗಾಗಿ ಭಟ್ಕಳದ ಮುಸ್ಲಿಂ ಯುವಕರು ಇಸ್ಲಾಂ ಧ್ವಜವನ್ನು ಹಿಡಿದು ನಗರದ ಬೀದಿಯಲ್ಲಿ ಸಂಭ್ರಮಿಸಿದ್ದಲ್ಲದೇ ಭಟ್ಕಳ ಸಂಶುದ್ದೀನ್ ಸರ್ಕಲ್ ಮೇಲೆ ನಿಂತು ಕೇಸರಿ ಬಾವುಟದ ಪಕ್ಕದಲ್ಲಿ ಇಸ್ಲಾಂ ಧ್ವಜ ಹಿಡಿದು ಸಂಭ್ರಮಾಚರಣೆ ನಡೆಸಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
Advertisement
Advertisement
ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಕಾಳು ವೈದ್ಯ ಅವರು ಬಿಜೆಪಿಯ ಸುನಿಲ್ ನಾಯಕ್ ವಿರುದ್ಧ 32 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಮಂಕಾಳು ವೈದ್ಯರ ಗೆಲುವನ್ನು ಸಂಭ್ರಮಿಸುವ ವೇಳೆ ಭಟ್ಕಳ ಪಟ್ಟಣದಲ್ಲಿರುವ ಸಂಶುದ್ದೀನ್ ವೃತ್ತದ ಮೇಲೇರಿದ ಮುಸ್ಲಿಂ ಯುವಕರು ಕೇಸರಿ ಧ್ವಜದ ಪಕ್ಕ ನಿಂತು ಇಸ್ಲಾಂ ಧ್ವಜ ಪ್ರದರ್ಶನ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೋಲಿನ ಜವಾಬ್ದಾರಿ ನಾನೇ ಹೊರುತ್ತೇನೆ: ಬೊಮ್ಮಾಯಿ
Advertisement
ಮಂಕಾಳು ವೈದ್ಯ ಭಾವಚಿತ್ರವಿರುವ ಧ್ವಜ, ಅಂಬೇಡ್ಕರ್‌ರ ಧ್ವಜದೊಂದಿಗೆ ಮುಸ್ಲಿಂ ಧ್ವಜ ಪ್ರದರ್ಶನ ಮಾಡಿ ವೃತ್ತದಲ್ಲಿ ಹಾಕಲಾಗಿದ್ದ ಕೇಸರಿ ಧ್ವಜದ ಪಕ್ಷದಲ್ಲೇ ಮುಸ್ಲಿಂ ಧ್ವಜ ಹಾಕಿದ್ದಾರೆ. ಸದ್ಯ ಇದರ ವೀಡಿಯೋ ವೈರಲ್ ಆಗುತ್ತಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
Advertisement
ಹಿಂದೂಗಳ ಹೆಣ ಎತ್ತಲೂ ಯಾರು ಇರಬಾರದು:
ಕಾಂಗ್ರೆಸ್‌ಗೆ ಬಹುಮತ ಬರುತ್ತಿದ್ದಂತೆ ಇದರ ಸಂತೋಷಕ್ಕೆ ಭಟ್ಕಳದಲ್ಲಿ ಇಸ್ಲಾಂ ಧ್ವಜ ಹಾರಿಸಲಾಯಿತು. ಮಾತ್ರವಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸಮಾಜಘಾತುಕ ಸಂದೇಶಗಳನ್ನು ರವಾನಿಸಲಾಗುತ್ತಿದೆ. ಹಿಂದೂಗಳ ಹೆಣ ಎತ್ತಲೂ ಯಾರೂ ಇರಬಾರದು. ಕರ್ನಾಟಕದಲ್ಲಿ ಇನ್ನು ಮುಂದೆ ಮುಸ್ಲಿಂ ಹವಾ, ಅಲ್ಲಾಹು ಅಕ್ಬರ್ ಎಂದು ಮುಸ್ಲಿಂ ಯುವಕನೊಬ್ಬ ಮಾಡಿದ ಕಾಮೆಂಟ್‌ನ ಸ್ಕ್ರೀನ್ ಶಾಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್ 136, ಬಿಜೆಪಿ 65, ಜೆಡಿಎಸ್ 19 ಮುನ್ನಡೆ LIVE Updates