ಮೈದಾನಕ್ಕೆ ನುಗ್ಗಿ ವಿರಾಟ್‌ ಪಾದ ಮುಟ್ಟಿ‌, ಅಪ್ಪಿಕೊಂಡ – ಭದ್ರತೆ ಉಲ್ಲಂಘಿಸಿದ ಕೊಹ್ಲಿ ಅಪ್ಪಟ ಅಭಿಮಾನಿಗೆ ಸಂಕಷ್ಟ

Public TV
2 Min Read
VIRAT Kohli 2

ಇಂದೋರ್‌: ಟೀಂ ಇಂಡಿಯಾ ಮತ್ತು ಅಫ್ಘಾನಿಸ್ತಾನ (Ind vs Afg) ನಡುವಿನ 2ನೇ ಟಿ20 ಪಂದ್ಯದ ವೇಳೆ ಇಂದೋರ್‌ನ ಹೋಳ್ಕರ್‌ ಮೈದಾನದಲ್ಲಿ ಭದ್ರತೆ ಉಲ್ಲಂಘಿಸಿದ ಕ್ರಿಕೆಟಿಗ ವಿರಾಟ್‌ ಕೊಹ್ಲಿ (Virat Kohli) ಅವರ ಅಪ್ಪಟ ಅಭಿಮಾನಿಗೆ ಸಂಕಷ್ಟ ಎದುರಾಗಿದೆ.

ಪಂದ್ಯದಲ್ಲಿ ಅಫ್ಘಾನಿಸ್ತಾನದ ಇನ್ನಿಂಗ್ಸ್‌ ವೇಳೆ ಕೊಹ್ಲಿಯ ಅಪ್ಪಟ ಅಭಿಮಾನಿಯೊಬ್ಬ (Virat Kohli Fan) ಭದ್ರತೆ ಉಲ್ಲಂಘಿಸಿ ಮೈದಾನಕ್ಕೆ ಹಾರಿಬಂದು ಕೊಹ್ಲಿಯನ್ನು ಭೇಟಿಯಾಗಿದ್ದಾನೆ.‌ ಓಡಿಬಂದು ಬೌಂಡರಿ ಲೈನ್‌ ಬಳಿ ನಿಂತಿದ್ದ ಕೊಹ್ಲಿಯ ಪಾದಮುಟ್ಟಿದ್ದಾನೆ, ಬಳಿಕ ಅಪ್ಪಿಗೊಂಡು ಭಾವುಕನಾಗಿದ್ದಾನೆ. ಮೈದಾನಕ್ಕೆ ನುಗ್ಗಿದ ಅಭಿಮಾನಿಯನ್ನು ಮಧ್ಯಪ್ರದೇಶ ಪೊಲೀಸರು (MadhyaPradesh Police) ವಶಕ್ಕೆ ಪಡೆದಿದ್ದಾರೆ. ಯುವಕನನ್ನು ತುಕೋಗಂಜ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಇದನ್ನೂ ಓದಿ: ಆಫ್ಘನ್ ತಂಡದ ವಿರುದ್ಧ ಭಾರತ ಗೆಲುವು – ಜೈಸ್ವಾಲ್, ದುಬೆ ಅರ್ಧ ಶತಕ

ಟಿಕೆಟ್‌ ಖರೀದಿಸಿ ಪಂದ್ಯ ವೀಕ್ಷಿಸಲು ಬಂದಿದ್ದ ಯುವಕ ನರೇಂದ್ರ ಹಿರ್ವಾನಿ ಗೇಟ್‌ ಮೂಲಕ ಮೈದಾನಕ್ಕೆ ನುಗ್ಗಿದ್ದಾನೆ. ಯುವಕನು ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿದ್ದು, ಹಿರಿಯ ಆಟಗಾರನನ್ನು ಭೇಟಿಯಾಗಬೇಕೆಂಬ ಆಸೆಯಿಂದ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಮೈದಾನ ಪ್ರವೇಶಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ ಯುವಕನ ವಿಚಾರಣೆ ನಡೆಸಲಾಗುತ್ತಿದ್ದು, ವಿಚಾರಣೆ ಮುಗಿದ ಬಳಿಕ ಬಳಿಕ ಮುಂದಿನ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ – ಯುಪಿ ಮೂಲದ ಹೊಸ ಆಟಗಾರನಿಗೆ ಚಾನ್ಸ್

virat kohli 1

ಭಾರತಕ್ಕೆ ಸರಣಿ ಜಯ: ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಗೆದ್ದುಕೊಂಡಿದೆ. ಆರಂಭಿಕ ಎರಡು ಪಂದ್ಯಗಳನ್ನು ಗೆದ್ದು ಸರಣಿ ತನ್ನದಾಗಿಸಿಕೊಂಡಿರುವ ಭಾರತ, ತವರಿನಲ್ಲೇ ವೈಟ್‌ವಾಶ್‌ ಮಾಡುವ ಗುರಿ ಹೊಂದಿದೆ. ಭಾನುವಾರ ಇಂದೋರ್‌ನ ಹೋಳ್ಕರ್‌ ಮೈದಾನದಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿತು.

Shivam Dube Yashasvi Jaiswal

ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡವು ಗುಲ್ಬದೀನ್ ನಯೀಬ್ ಅವರ ಅರ್ಧಶತಕದ ನೆರವಿನಿಂದ 20 ಓವರ್​​​ಗಳಲ್ಲಿ 172 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿದ್ದ ಭಾರತ ಯಶಸ್ವಿ ಜೈಸ್ವಾಲ್‌, ಶಿವಂ ದುಬೆ ಸ್ಫೋಟಕ ಅರ್ಧಶತಕಗಳ ನೆರವಿನಿಂದ 15.4 ಓವರ್‌ಗಳಲ್ಲೇ 173 ರನ್‌ ಗಳಿಸಿ ಗೆಲುವು ಸಾಧಿಸಿತು. ಇದನ್ನೂ ಓದಿ: ಆಫ್ಘನ್ ತಂಡದ ವಿರುದ್ಧ ಭಾರತ ಗೆಲುವು – ಜೈಸ್ವಾಲ್, ದುಬೆ ಅರ್ಧ ಶತಕ

Share This Article