ಬೀಜಿಂಗ್: 2 ಲಕ್ಷ ರೂ. ಬಹುಮಾನಕ್ಕಾಗಿ ಆಫಿಸ್ ಪಾರ್ಟಿಯಲ್ಲಿ 10 ನಿಮಿಷದಲ್ಲಿ ಒಂದು ಲೀಟರ್ ಹಾರ್ಡ್ ಡ್ರಿಂಕ್ಸ್ (Alcohol) ಕುಡಿದು ವ್ಯಕ್ತಿಯೊಬ್ಬ ಸಾವಿಗೀಡಾದ ಘಟನೆ ಚೀನಾದಲ್ಲಿ (China) ನಡೆದಿದೆ.
ಝಾಂಗ್ ಎಂಬಾತ ತನ್ನ ಕಚೇರಿಯ ಸಹೋದ್ಯೋಗಿಗಳಿಗೆ ಮಾಲೀಕ ಆಯೋಜಿದ್ದ ಔತಣಕೂಟಕ್ಕೆ ತೆರಳಿದ್ದ. ಈ ವೇಳೆ ಕುಡಿಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಯಾರಾದರೂ ಕುಡಿತದಲ್ಲಿ ಝಾಂಗ್‍ನನ್ನು ಮೀರಿಸಿದರೆ 20,000 ಯುವಾನ್ ಬಹುಮಾನವನ್ನು ನೀಡುವುದಾಗಿ ಈ ವೇಳೆ ಘೋಷಿಸಲಾಗಿದೆ. ಸ್ಪರ್ಧೆಯಲ್ಲಿ ಸೋತರೆ ಅದೇ ಮೊತ್ತದ ಪಾರ್ಟಿ ಕೊಡಿಸುವಂತೆ ಹೇಳಲಾಗಿದೆ. ಬಳಿಕ ತೀವ್ರ ಮದ್ಯ ಸೇವನೆ ಮಾಡಿದ ಝಾಂಗ್ ಅಸ್ವಸ್ಥನಾಗಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಪ್ರಾಣಿಗಳ ದಿನಕ್ಕೆ ಮುದ್ದಾದ ಪಪ್ಪಿಯನ್ನು ತಾಯಿಗೆ ಉಡುಗೊರೆ ನೀಡಿದ್ರು ರಾಹುಲ್
Advertisement
Advertisement
ಔತಣಕೂಟದಲ್ಲಿದ್ದ ಉದ್ಯೋಗಿಯೊಬ್ಬರು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಝಾಂಗ್ 10 ನಿಮಿಷಗಳಲ್ಲಿ ಒಂದು ಲೀಟರ್ ಬೈಜು ಎಂಬ ಹಾರ್ಡ್ ಡ್ರಿಂಕ್ಸ್ ಕುಡಿದಿದ್ದಾನೆ. ಇದು 30% ರಿಂದ 60% ರಷ್ಟು ವಿಶಿಷ್ಟವಾದ ಆಲ್ಕೋಹಾಲ್ ಅಂಶ ಹೊಂದಿರುವ ಚೈನೀಸ್ ಸ್ಪಿರಿಟ್ ಆಗಿದೆ ಎಂದು ತಿಳಿಸಿದ್ದಾರೆ.
Advertisement
ಝಾಂಗ್ ಕುಸಿದು ಬಿದ್ದ ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅವರು ಉಸಿರುಗಟ್ಟುವಿಕೆ ಮತ್ತು ಹೃದಯ ಸ್ತಂಭನದಿಂದ ಮೃತಪಟ್ಟರು ಎಂದು ಹೇಳಿದ್ದಾರೆ.
Advertisement
ಇದೇ ಮದ್ಯವನ್ನು ಸೇವಿಸಿ ಚೀನಾದಲ್ಲಿ ಇತ್ತೀಚೆಗೆ ಪ್ರಭಾವಿ ಒಬ್ಬರು ಮೃತಪಟ್ಟಿದ್ದರು. ಬಳಿಕ ಈ ಮದ್ಯದ ಬಗ್ಗೆ ಚೀನಾದಲ್ಲಿ ಭಾರೀ ಚರ್ಚೆ ಶುರುವಾಗಿದೆ. ಇದನ್ನೂ ಓದಿ: ಆಂಧ್ರಪ್ರದೇಶ-ತೆಲಂಗಾಣ ನಡುವೆ ಕೃಷ್ಣಾ ನದಿ ನೀರು ಹಂಚಿಕೆ ವಿವಾದ- ಕೃಷ್ಣಾ ನ್ಯಾಯಧಿಕರಣ 2 ರಚನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
Web Stories