ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿ – ಮೆಟ್ರೋ ರೈಲು ಹಳಿಗೆ ಧುಮುಕಿ ಆತ್ಮಹತ್ಯೆ

Public TV
2 Min Read
Delhi Metro

ನವದೆಹಲಿ: ಕ್ಯಾನ್ಸರ್‌ನಿಂದ (Cancer) ಬಳಲುತ್ತಿದ್ದ 39 ವರ್ಷದ ವ್ಯಕ್ತಿಯೊಬ್ಬ ಮೆಟ್ರೋ ರೈಲು (Metro Train) ಬರುತ್ತಿದ್ದಂತೆ ಹಳಿಗೆ (ಹಳದಿ ಮೆಟ್ರೋ ಲೇನ್) ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ದೆಹಲಿಯ ಉದ್ಯೋಗ ಭವನ ಮೆಟ್ರೋ ನಿಲ್ದಾಣದಲ್ಲಿ (Udyog Bhawan Metro Station) ಘಟನೆ ನಡೆದಿದೆ. ದೆಹಲಿ ವಿಶ್ವವಿದ್ಯಾಲಯದ ಕಡೆಗೆ ಹೋಗುತ್ತಿದ್ದ ರೈಲಿಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂದರ್ಭದಲ್ಲಿ ಸುಮಾರು 35 ನಿಮಿಷಗಳ ಕಾಲ ಮೆಟ್ರೋ ಸೇವೆ ಸ್ಥಗಿತಗೊಳಿಸಲಾಗಿತ್ತು ಎಂದು ಡಿಎಂಆರ್‌ಸಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕೇವಲ 100 ರೂ. ಕ್ಯಾನ್ಸರ್‌ಗೆ ಚಿಕಿತ್ಸೆ – ಟಾಟಾ ಸಂಸ್ಥೆಯಿಂದ ಮಾತ್ರೆ ಅಭಿವೃದ್ಧಿ

delhi metro 1

ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?
ದೆಹಲಿ ಪೊಲೀಸರ (Delhi Police) ಪ್ರಕಾರ, ಆತ್ಮಹತ್ಯೆ ಮಾಡಿಕೊಂಡ 39 ವರ್ಷದ ವ್ಯಕ್ತಿ ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ. ಇದರಿಂದ ತೀವ್ರ ಅಸಮಾಧಾನಗೊಂಡಿದ್ದ. ಹಾಗಾಗಿಯೇ ಆತ್ಮಹತ್ಯೆಗೆ ಮುಂದಾಗಿದ್ದಾನೆ ಎಂದು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ 11:30ರ ಸುಮಾರಿಗೆ ಘಟನೆ ನಡೆದಿದೆ. ಬಳಿಕ ರಾಜೀವ್ ಚೌಕ್ ಪೊಲೀಸ್ ಠಾಣೆಗೆ ಪಿಸಿಆರ್ ದೂರವಾಣಿ ಕರೆ ಮಾಡಿ ಮೆಟ್ರೋ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಇಸ್ರೋ ರಾಕೆಟ್‌ನಲ್ಲಿ ಚೀನಾ ಧ್ವಜ – ಭಾರತದ ಸಾಧನೆ ಒಪ್ಪಿಕೊಳ್ಳಲು ಡಿಎಂಕೆಗೆ ಆಗಲ್ಲ ಎಂದ ಮೋದಿ

Delhi metro 1

ದೆಹಲಿಯ ಮುಕುಂದಪುರದಲ್ಲಿ ವಾಸಿಸುತ್ತಿದ್ದ ಮೃತ ವ್ಯಕ್ತಿ, ಕ್ಯಾನ್ಸರ್‌ನಿಂದ ಬಳಲುತ್ತಿದ್ದ. ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅನಾರೋಗ್ಯ ಕಾರಣದಿಂದ ಇತ್ತೀಚಿನ ದಿನಗಳಲ್ಲಿ ಸರಿಯಾಗಿ ಕೆಲಸ ಮಾಡಲೂ ಆಗುತ್ತಿರಲಿಲ್ಲ ಎಂದು ಅವರ ಪತ್ನಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಮೃತದೇಹವನ್ನು ಆರ್‌ಎಂಎಲ್‌ ಆಸ್ಪತ್ರೆಗೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಸಿಆರ್‌ಪಿಸಿಯ ಸೆಕ್ಷನ್ 174 (ಅಸ್ವಾಭಾವಿಕ ಸಾವು) ಅಡಿಯಲ್ಲಿ ವಿಚಾರಣೆ ಪ್ರಕ್ರಿಯೆಗಳು ನಡೆಯುತ್ತಿವೆ. ಇದರೊಂದಿಗೆ ಮೃತ ವ್ಯಕ್ತಿಯ ಜೇಬಿನಿಂದ ಸಿಕ್ಕ ಚೀಟಿಯಲ್ಲಿ ಮೊಬೈಲ್‌ ನಂಬರ್‌ ಪತ್ತೆಯಾಗಿದ್ದು, ಅದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: 2026 ರ ಅಸೆಂಬ್ಲಿ ಚುನಾವಣೆ ಹೊತ್ತಿಗೆ ಕೆಲವೇ ಮುಸ್ಲಿಮರು ಕಾಂಗ್ರೆಸ್‌ನಲ್ಲಿ ಉಳಿಯುತ್ತಾರೆ: ಅಸ್ಸಾಂ ಸಿಎಂ

NAMMA METRO

ಕಳೆದ ತಿಂಗಳು ಜನವರಿಯಲ್ಲಿ ಬೆಂಗಳೂರಿನಲ್ಲೂ ಇದೇ ರೀತಿಯ ಘಟನೆ ನಡೆದಿತ್ತು. ಮೆಟ್ರೋ ರೈಲು ಮುಂದೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿತ್ತು. ಕೇರಳ ಮೂಲದ 23 ವರ್ಷದ ಶಾರೋನ್‌ ರಾತ್ರಿ 7.12ರ ವೇಳೆಗೆ ರೈಲು ಬಂದಾಗ ಉದ್ದೇಶಪೂರ್ವಕವಾಗಿಯೇ ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಕಿಗೆ ಬಂದಿತ್ತು.

Share This Article