ಬೆಂಗಳೂರು: ವಿದ್ಯುತ್ ಅವಘಡಕ್ಕೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕಾಸರಘಟ್ ಗ್ರಾಮದ ಬಳಿ ನಡೆದಿದೆ.
ಮೃತ ದುರ್ದೈವಿ ವ್ಯಕ್ತಿಯನ್ನು ರಾಮಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆ ಮುಂದೆ ನಿಂತಿದ್ದ ವೇಳೆ ನಡೆದ ಭಾರೀ ಅವಘಡಕ್ಕೆ ತುತ್ತಾಗಿದ್ದಾರೆ.
ಮೃತ ರಾಮಕೃಷ್ಣಪ್ಪ ಅವರು ಮನೆ ಮುಂದೆ ನಿಂತಿದ್ದರು. ಈ ವೇಳೆ ಏಕಾಏಕಿ ಬಂದ ಇಂಡಿಕಾ ಕಾರೊಂದು ಮೃತ ವ್ಯಕ್ತಿಯ ಮನೆಯ ಮುಂದಿದ್ದ ವಿದ್ಯುತ್ ಕಂಬಕ್ಕೆ ಗುದ್ದಿದೆ. ಕಾರು ಕಂಬಕ್ಕೆ ಡಿಕ್ಕಿಯಾಗುತ್ತಿದ್ದಂತೆಯೇ ಶಾರ್ಟ್ ಸಕ್ರ್ಯೂಟ್ ಉಂಟಾಗಿದೆ. ಪರಿಣಾಮ ಅಲ್ಲೆ ನಿಂತಿದ್ದ ರಾಮಕೃಷ್ಣಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿ ನಾಲ್ವರಿದ್ದು ಅವರು ಪಾನಮತ್ತರಾಗಿ ಗಾಂಜ ಸೇವಿಸಿದ ಶಂಕೆ ವ್ಯಕ್ತವಾಗುತ್ತಿದೆ. ಇವರಲ್ಲಿ ಮೂವರು ನಾಪತ್ತೆಯಾಗಿದ್ದು, ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv