ಮೈಸೂರು: ವ್ಯಕ್ತಿಯ ಮರ್ಮಾಂಗವನ್ನೇ ಕತ್ತರಿಸಿ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಜಿಲ್ಲೆಯ ಹುಣಸೂರಿನ ರಂಗನಾಥ ಬಡಾವಣೆಯಲ್ಲಿ ನಡೆದಿದೆ.
ಬಡಾವಣೆ ನಿವಾಸಿ ಮಹೇಶ್(45) ಮೃತ ದುರ್ದೈವಿ. ಇಂದು ಮುಂಜಾನೆ ಮೃತದೇಹವನ್ನ ಸ್ಥಳೀಯರು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ನಂತರ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.
Advertisement
Advertisement
ಮಹೇಶ್ ಈಗಾಗಲೇ ಮದುವೆಯಾಗಿದ್ದು, ಬೇರೊಬ್ಬ ಮಹಿಳೆಯ ಜೊತೆ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ವಿಚಾರ ಮೊದಲನೇ ಪತ್ನಿಗೆ ತಿಳಿಯುತ್ತಿದ್ದಂತೆ ಆಕೆಯ ಸಂಬಂಧಿಕರು ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದಾನೆ ಎಂದು ಶಂಕಿಸಿ ಗುರುವಾರ ರಾತ್ರಿ ಹೊರಗಡೆ ಮಲಗಿದ್ದ ಮಹೇಶ್ ನ ಮರ್ಮಾಂಗ ಕತ್ತರಿಸಿ ಕೊಲೆ ಮಾಡಿ ಹೋಗಿದ್ದಾರೆ ಎಂದು ಹೇಳಲಾಗಿದೆ.
Advertisement
ಈ ಘಟನೆ ಸಂಬಂಧ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.