ಯಾದಗಿರಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆಯ ಜಿಲ್ಲೆಯ ಸುರಪುರ ತಾಲೂಕಿನ ಅಗತಿರ್ಥಿ ಗ್ರಾಮದಲ್ಲಿ ನಡೆದಿದೆ.
45 ವರ್ಷದ ನಂದಪ್ಪ ದೊಡ್ಡಮನಿ ಕೊಲೆಯಾದ ದುರ್ದೈವಿ. ಶನಿವಾರ ರಾತ್ರಿಯ ವೇಳೆ ನಂದಪ್ಪ ಬೈಕ್ ನಲ್ಲಿ ಹೋಗುತ್ತಿರುವಾಗ 10 ಜನರ ತಂಡವೊಂದು ಬೈಕ್ ತಡೆದು ನಂದಪ್ಪ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದೆ.
ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ನಂದಪ್ಪರನ್ನು ಅಲ್ಲಿದ್ದ ಜನರು ಸಮೀಪದ ಹುಣಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ನಂದಪ್ಪ ಗಂಭೀರವಾಗಿ ಗಾಯಗೊಂಡಿದ್ದರಿಂದ, ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರಕ್ಕೆ ಕರೆದುಕೊಂಡು ಹೋಗುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಹಣ ಕೇಳುವ ವಿಚಾರದಲ್ಲಿ ಈ ಕೊಲೆ ನಡೆದಿದೆ ಅಂತ ಮೃತ ನಂದಪ್ಪ ಪತ್ನಿ ಪರಮವ್ವ, 12 ಜನರ ವಿರುದ್ಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.
ಸದ್ಯ ಪ್ರಕರಣ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆಯನ್ನ ನಡೆಸಿದ್ದಾರೆ.