ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.
ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ( Mekhri Circle Car Accident) ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಘಟನೆ ತಡರಾತ್ರಿ 11.30ರ ಸುಮಾರಿಗೆ ಮೇಖ್ರಿ ಸರ್ಕಲ್ ಸಮೀಪ ನಡೆದಿದೆ.
Advertisement
Advertisement
ಕೈಯಲ್ಲಿ ವಯೋವೃದ್ಧ ವ್ಯಕ್ತಿಯ ಫೋಟೋ ಹಿಡಿದು 40 ವರ್ಷದ ಪಾದಚಾರಿ ರಸ್ತೆ ದಾಟುತ್ತಿದ್ದರು. ಈ ವೇಳೆ ಕಾರು ಬಂದು ಡಿಕ್ಕಿ ಹೊಡೆದಿದೆ. ಅಪಘಾತವಾದ ಕೂಡಲೇ ವ್ಯಕ್ತಿಯನ್ನು ಅಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪಿದ್ದಾರೆ. ಇದನ್ನೂ ಓದಿ: ಜಿಎಸ್‌ಟಿ ಹೆಸರಲ್ಲಿ 9.60 ಕೋಟಿ ವಂಚನೆ – ಇಬ್ಬರು ಅರೆಸ್ಟ್
Advertisement
Advertisement
ಕಪ್ಪು ಬಣ್ಣದ ಬೆನ್ಜ್ ಕಾರು ಹಿಟ್ ರನ್ (Hit & Run) ಮಾಡಿದ್ದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದರು. ಸಾವನ್ನಪ್ಪಿದ ಪಾದಚಾರಿ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಮಾಹಿತಿ ಆಧರಿಸಿ, ಸಿಸಿ ಕ್ಯಾಮರ ದೃಶ್ಯ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸದಾಶಿವನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k