ಬೆಳಗಾವಿ: ಪತ್ನಿ ಕೊಲೆಗೈದ ಪತಿಯೊಬ್ಬ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಾಲಾಪುರ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ರಾಮದುರ್ಗ (Ramadurga) ತಾಲೂಕಿನ ಸಾಲಾಪೂರ ಗ್ರಾಮದ ಜಾನವ್ವ ದ್ಯಾಮನ್ನವರ (50) ಸ್ಥಳದಲ್ಲೇ ಸಾವನ್ನಪ್ಪಿದ ಮಹಿಳೆ. ಮಾರಕಾಸ್ತ್ರದಿಂದ ಹೊಡೆದು ಪತ್ನಿ ಜಾನವ್ವರನ್ನ ಪತಿ ಬಸವಗೌಡ ಶಾಸಪ್ಪನವರ (55) ಕೊಲೆ ಮಾಡಿದ್ದಾನೆ.
ಪತ್ನಿ ಕೊಲೆಗೈದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಪೊಲೀಸರ ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕಟಕೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಸವಗೌಡ, ಜಾನವ್ವ ಮೃತದೇಹ ರಾಮದುರ್ಗ ತಾಲೂಕಾಸ್ಪತ್ರೆಗೆ ರವಾನಿಸಲಾಗಿದ್ದು, ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ವಿವಾಹಿತೆ ಜೊತೆ ಓಡಿಹೋಗಿದ್ದಕ್ಕೆ ವ್ಯಕ್ತಿಯ ಮೂಗನ್ನೇ ಕತ್ತರಿಸಿದ್ರು!