ಗದಗ: ಜಿಲ್ಲೆಯಲ್ಲಿ ಒಂದೇ ದಿನ ಎರಡು ಕೊಲೆಯಾಗಿದ್ದು, ವ್ಯಕ್ತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ರೆ ಇತ್ತ ರೋಣದಲ್ಲಿ ಯುವಕನನ್ನು ಮಾರಕಾಸ್ತರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಗದಗ ತಾಲೂಕಿನ ಅಸುಂಡಿ ಗ್ರಾಮದ ವಿನೋದಾ(28) ಪತಿಯಿಂದ ಕೊಲೆಯಾದ ದುರ್ದೈವಿ. ಆರೋಪಿ ಪತಿ ಹನುಮಂತ ಈ ಕೊಲೆ ಮಾಡಿದ್ದಾನೆ. ಆಸ್ತಿವಿವಾದಕ್ಕೆ ಸಂಬಂಧಪಟ್ಟಂತೆ ಕೌಟುಂಬಿಕ ಕಲಹವೇ ಈ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಜೊತೆಗೆ ಇಬ್ಬರ ನಡುವೆ ಮತ್ತೊಂದು ಅನೈತಿಕ ಸಂಬಂಧದ ಅನುಮಾನವೂ ಕಾರಣ ಎನ್ನಲಾಗುತ್ತಿದೆ.
Advertisement
ವಿನೋದಾ ಶುಕ್ರವಾರ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಪತಿ ಹನುಮಂತ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಲೆಮಾಡಿದ್ದಾನೆ. ಕೊಲೆ ಮಾಡಿದ ನಂತರ ಹನಮಂತ ಗದಗ ಗ್ರಾಮೀಣ ಪೊಲೀಸ್ ಠಾಣೆಗೆ ಸ್ವತ: ತಾನೆ ಬಂದು ಶರಣಾಗಿದ್ದಾನೆ. ಆರು ವರ್ಷದಿಂದ ಗಂಡ-ಹೆಂಡತಿ ನಡುವೆ ಜಗಳವಾಗಿ ಇಬ್ಬರು ದೂರವಿದ್ದರು. ಆರು ವರ್ಷದ ನಂತರ ಹೊಂಚು ಹಾಕಿ ಮಿಗಿಸಿಯೇ ಬಿಟ್ಟಿದ್ದಾನೆ ಎಂದು ಸಹೋದರ ಮಂಜುನಾಥ್ ಹೇಳಿದ್ದಾರೆ.
Advertisement
Advertisement
ಜಿಲ್ಲೆಯ ರೋಣ ತಾಲೂಕಿನ ಯಾ.ಸ. ಹಡಗಲಿ ಗ್ರಾಮದಲ್ಲಿ 20 ವರ್ಷದ ದಾವಲ್ ಸಾಬ್ ಬೆಳವಣಿಕಿ ಯುವಕನನ್ನ ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿದೆ. ಮನೆಯ ಮೇಲ್ಛಾವಣಿಯ ಮೇಲೆ ಮಲಗಲು ಹೋಗಿದ್ದನು. ಆದರೆ ಮುಂಜಾನೆ ರಕ್ತದ ಮಡುವಿನಲ್ಲಿ ಮೃತದೇಹ ಕಂಡು ಗ್ರಾಮಸ್ಥರು ಕಂಗಾಲಾಗಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.
Advertisement
ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆದರೆ ಕೊಲೆಗೆ ಕಾರಣ ಹಾಗೂ ಕೊಲೆ ಮಾಡಿದ ಆರೋಪಿ ಮಾತ್ರ ಪತ್ತೆಯಾಗಿಲ್ಲ. ಆರೋಪಿಗಳ ಸುಳಿವಿಗೆ ಪೊಲೀಸರು ಬಲೆ ಬೀಸಿದ್ದಾರೆ. ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews