ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಹಿಟ್ & ರನ್ ಪ್ರಕರಣಗಳು (Hit And Run Case) ಹೆಚ್ಚಾಗಿ ಕಂಡುಬರುತ್ತಿವೆ. ಪ್ರತಿ ಬಾರಿಯೂ ಸಾವು-ನೋವು ಸಂಭವಿಸುತ್ತಿದೆ. ಇದೇ ರೀತಿಯ ಘಟನೆ ಈಗ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣಾ (Cubbon Park Traffic Police Station) ವ್ಯಾಪ್ತಿಯಲ್ಲಿ ನಡೆದಿದೆ.
ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ವಾಹನ ಗುದ್ದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು (ಶುಕ್ರವಾರ) ಮುಂಜಾನೆ ನಡೆದಿದೆ. ಇದನ್ನೂ ಓದಿ: ಅಪ್ರಾಪ್ತ ಹಿಂದೂ ಬಾಲಕಿ ಪುಸಲಾಯಿಸಿ ಲವ್ ಜಿಹಾದ್ ಶಂಕೆ – ಪ್ರಶ್ನಿಸಿದ 8 ಭಜರಂಗದಳ ಕಾರ್ಯಕರ್ತರು ಅರೆಸ್ಟ್

ವಾಹನ ಗುದ್ದಿದ ರಭಸಕ್ಕೆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶ್ರೀನಿವಾಸ್ ಮೃತ ದುರ್ದೈವಿ. ಅಪಘಾತ ನಡೆದ ಬಳಿಕ ವಾಹನ ಸವಾರನೂ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ದೇಶದ ಆಹಾರ ದಾಸ್ತಾನು ಬಫರ್‌ಗಿಂತ ಮೂರು ಪಟ್ಟು ಹೆಚ್ಚು: ಜೋಶಿ
ಈ ಸಂಬಂಧ ಬಿಎನ್‌ಎಸ್ ಸೆಕ್ಷನ್ 106 ಅಡಿ ಪ್ರಕರಣ ದಾಖಲಿಸಿಕೊಂಡಿರುವ ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು, ತನಿಖೆಗೆ ಮುಂದಾಗಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸುತ್ತಿದ್ದಾರೆ.

