ಮಂಗಳೂರು: ಇಬ್ಬರು ಯುವಕರ ಮೇಲೆ ತಲ್ವಾರ್‌ನಿಂದ ದಾಳಿ (Sword Attack) ನಡೆಸಲಾಗಿದ್ದು, ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋಬ್ಬ ಗಾಯಗೊಂಡಿದ್ದಾನೆ.
ಪಿಕಪ್ ಚಾಲಕ ಅಬ್ದುಲ್ ರಹೀಂ ಬರ್ಬರವಾಗಿ ಕೊಲೆಯಾದ ಯುವಕ. ಕಲಂದರ್‌ಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ (Bantwal) ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ, ವಿದ್ಯುತ್ ಕಂಬಗಳು
ಕೊಳತ್ತಮಜಲು ನಿವಾಸಿ ಅಬ್ದುಲ್ ಇರಾಕೋಡಿ ಎಂಬಲ್ಲಿ ಮರಳು ಅನ್‌ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್‌ನಿಂದ ದಾಳಿ ನಡೆಸಿದ್ದಾರೆ. ಜೊತೆಗಿದ್ದ ಕಲಂದರ್ ಎಂಬಾತನ ಮೇಲೂ ದಾಳಿ ನಡೆಸಲಾಗಿದೆ. ಪರಿಣಾಮ ಅಬ್ದುಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದ್ವೇಷ ಭಾಷಣದ ಕಾರಣದಿಂದಲೇ ಕೊಲೆ ಆಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ದ್ವೇಷ ಭಾಷಣ ಮಾಡೋರನ್ನ ಬಂಧಿಸಿದ್ದರೆ ಕೊಲೆ ಆಗ್ತಾ ಇರಲಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. ಹಿಂದೂ ಮುಖಂಡರ ಬಂಧನಕ್ಕೆ ಆಗ್ರಹಿಸಿದ್ದಾರೆ. ಆಸ್ಪತ್ರೆ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಇದನ್ನೂ ಓದಿ: ಡಿವೈಡರ್‌ಗೆ ಲಾರಿ ಡಿಕ್ಕಿ – ಚೆಲ್ಲಾಪಿಲ್ಲಿಯಾದ ಔಷಧ ಬಾಕ್ಸ್‌ಗಳು
ಪ್ರಕರಣದ ಕುರಿತು ದ.ಕ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಮಾತನಾಡಿ, ಮಧ್ಯಾಹ್ನ 3:30ರ ವೇಳೆಗೆ ಘಟನೆಯಾಗಿದೆ. ಮರಳು ಸಾಗಾಟಕ್ಕೆಂದು ಹೋದಾಗ ಕೃತ್ಯ ನಡೆದಿದೆ. ರಹೀಂ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆಯಾಗಿತ್ತು. ಆಸ್ಪತ್ರೆಗೆ ದಾಖಲಿಸಿದಾಗ ಮೃತರಾಗಿರೋದು ಗೊತ್ತಾಗಿದೆ. ಇನ್ನೊಬ್ಬನಿಗೆ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೊಲೆಯ ಕಾರಣ ಮತ್ತು ಆರೋಪಿಗಳ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಶಂಕಿತರನ್ನು ಕರೆದು ವಿಚಾರಣೆಯನ್ನು ಮಾಡುತ್ತಿದ್ದೇವೆ. ತನಿಖೆ ನಡೆಯುತ್ತಿರೋದರಿಂದ ಬೇರೆ ಮಾಹಿತಿ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆ ಹಿನ್ನೆಲೆ ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದಿನಿAದ ಮೇ 30ರ ಸಂಜೆ ಆರು ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ದ.ಕ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿ ಆನಂದ್ ಆದೇಶ ಹೊರಡಿಸಿದ್ದಾರೆ.