ಮುಂಬೈ: 54 ವರ್ಷದ ವ್ಯಕ್ತಿಯನ್ನು ಆತನ ಪತ್ನಿ ಮತ್ತು ಮಗ ಸೇರಿ ಕೊಂದು ಆತನ ಶವವನ್ನು ಕಟ್ಟಡದ ಏಳನೇ ಮಹಡಿಯಿಂದ ಎಸೆದ ಘಟನೆ ಮುಂಬೈನ ಅಂಬೋಲಿ ಪ್ರದೇಶದಲ್ಲಿ ನಡೆದಿದೆ.
ಶಾಂತನುಕೃಷ್ಣ ಶೇಷಾದ್ರಿ ಮೃತ ವ್ಯಕ್ತಿ. ಕೌಂಟುಬಿಕ ಕಲಹದ ಹಿನ್ನೆಲೆಯಲ್ಲಿ ಶೇಷಾದ್ರಿಯನ್ನು ತಾಯಿ ಮತ್ತು ಮಗ ಸೇರಿ ಕೊಂದಿದ್ದಾರೆ. ಇದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಶೇಷಾದ್ರಿಯನ್ನು 7ನೇ ಮಹಡಿಯಿಂದ ಕೆಳಗೆ ಎಸೆದಿದ್ದಾರೆ. ನಂತರ ಪೊಲೀಸರ ಬಳಿಯೂ ಶೇಷಾದ್ರಿ ಮಹಡಿಯಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಈ ಹಿಂದೆಯೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಆಸ್ತಿ ವಿವಾದ – ಗರ್ಭಿಣಿ ಸೇರಿದಂತೆ ಮೂವರನ್ನು ಬೆಂಕಿಗೆ ಹಾಕಿದ ದುರುಳರು
ತನಿಖೆ ಮಾಡಿದ ಪೊಲೀಸರು ಪ್ರಕರಣವನ್ನು ಬೇಧಿಸಿದ್ದಾರೆ. ಜೊತೆಗ ತನಿಖೆ ವೇಳೆ ತಾಯಿ ಮಗ ಸುಳ್ಳು ಹೇಳುತ್ತಿರುವುದು ಬಯಲಾಗಿದೆ. ಇವರಿಬ್ಬರು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ಮಹಿಳೆ ಮತ್ತು ಆಕೆಯ ಮಗನ ವಿರುದ್ಧ ದೂರು ದಾಖಲಿಸಿಕೊಂಡು, ಇಬ್ಬರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಚಿನ್ನಕ್ಕಾಗಿ ವೃದ್ಧನ ಕಿವಿ ಕತ್ತರಿಸಿ ಹತ್ಯೆ