ಅಮರಾವತಿ: ವ್ಯಕ್ತಿಯೊಬ್ಬ ಮೂವರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಘಟನೆ ಆಂಧ್ರ ಪ್ರದೇಶದ (Andhra Pradesh) ನಂದ್ಯಾಲ್‌ನ ಉಯ್ಯಾಲವಾಡ ಗ್ರಾಮದಲ್ಲಿ ನಡೆದಿದೆ.
ಕುಟುಂಬವು ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿತ್ತು, ಇದು ಮಕ್ಕಳ ಹತ್ಯೆ ಹಾಗೂ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಆತನ ಪತ್ನಿ ಕಳೆದ ಆಗಸ್ಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.
ಮಕ್ಕಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಹೆಚ್ಚಿನ ವಿವರಗಳು ಹೊರಬರಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ ಕುಟುಂಬವು ತೀವ್ರ ಆರ್ಥಿಕ ಸಂಕಷ್ಟದಲ್ಲಿತ್ತು. ಇದು ದುರಂತಕ್ಕೆ ಕಾರಣವಾಗಿರಬಹುದು. ಆಗಸ್ಟ್‌ನಲ್ಲಿ ಆ ವ್ಯಕ್ತಿಯ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ದುಃಖದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ. ಈ ಘಟನೆಯ ಹಿಂದಿನ ನಿಖರವಾದ ಕಾರಣ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

