- ಪರಾರಿಗೆ ಯತ್ನಿಸಿದ ಆರೋಪಿಯನ್ನು ಹಿಡಿದು ಮರಕ್ಕೆ ಕಟ್ಟಿದ ಜನ
ದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ (Lover) ಕತ್ತು ಸೀಳಿ ಹತ್ಯೆಗೈದ (Murder) ಘಟನೆ ದಾವಣಗೆರೆಯ (Davanagere) ಶೇಖರಪ್ಪ ನಗರದಲ್ಲಿ ನಡೆದಿದೆ.
ನಾಗರತ್ನ (45) ಕೊಲೆಯಾದ ಮಹಿಳೆ. ನಾಗರಾಜ್ (36) ಕೊಲೆ ಆರೋಪಿಯಾಗಿದ್ದಾನೆ. ಈತ ಮಹಿಳೆಯೊಂದಿಗೆ ಹಲವು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಮಹಿಳೆಯನ್ನು ಕೊಲೆಗೈದು ಆರೋಪಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಮಹಿಳೆಯ ಕಿರುಚಾಟ ಕೇಳಿ ಬಂದ ಜನ ಆತನನ್ನು ಹಿಡಿದು ತೆಂಗಿನ ಮರಕ್ಕೆ ಕಟ್ಟಿ ಹಾಕಿದ್ದರು. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಕುಡಿದ ಮತ್ತಲ್ಲಿ ಸೀರೆಯಲ್ಲಿ ಕತ್ತು ಬಿಗಿದು ಪ್ರಿಯಕರನ ಹತ್ಯೆ – ಮಹಿಳೆ ಅರೆಸ್ಟ್
ನಾಗರತ್ನ ಪತಿಯನ್ನು ತ್ಯಜಿಸಿ ತನ್ನ ಮೂರು ಮಕ್ಕಳನ್ನು ಬೇರೆ ಕಡೆ ಮನೆ ಮಾಡಿ ಬಿಟ್ಟಿದ್ದಳು. ತಾನು ಒಂಟಿಯಾಗಿ ಜೀವನ ಮಾಡುತ್ತಿದ್ದಳು. ಕಲ್ಯಾಣ ಮಂಟಪದಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರತ್ನಳಿಗೆ ನಾಗರಾಜ್ ಪರಿಚಯವಾಗಿದ್ದ. ಬಳಿಕ ಆಕೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ.
ಕೆಲ ದಿನಗಳಿಂದ ಇಬ್ಬರ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಇದರಿಂದ ಸುತ್ತಮುತ್ತಲಿನ ಜನರು ಈಕೆಯನ್ನು ಮನೆ ಖಾಲಿ ಮಾಡಿಕೊಂಡು ಹೋಗುವಂತೆ ಹೇಳಿದ್ದರು. ಅದರೂ ಕೂಡ ಅಲ್ಲೇ ವಾಸ ಮಾಡುತ್ತಿದ್ದಳು. ಇಂದು (ಸೆ.19) ಬೆಳಗ್ಗೆ 10:30ರ ಸುಮಾರಿಗೆ ಪ್ರಿಯಕರ ನಾಗರಾಜ್, ನಾಗರತ್ನಳನ್ನು ಅವಳ ಮನೆಯ ಮೇಲೆ ಕರೆದೊಯ್ದು ಚಾಕುವಿನಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಆರ್ಎಂಸಿ ಯಾರ್ಡ್ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಲಾಡ್ಜ್ನಲ್ಲಿ ಹೆಂಡತಿ ಕೊಂದು ಪರಾರಿಯಾಗಿದ್ದ ಗಂಡ ಆತ್ಮಹತ್ಯೆ

