ಚಿಕ್ಕಬಳ್ಳಾಪುರ: ಪ್ರಿಯಕರನ ಜೊತೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಯನ್ನು ಪತಿ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಚೇಳೂರಿನ ಚಿನಗಾನಪಲ್ಲಿಯಲ್ಲಿ ನಡೆದಿದೆ.
ಹತ್ಯೆಯಾದ ಮಹಿಳೆಯನ್ನು ನರಸಮ್ಮ (45) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಗಂಗುಲಪ್ಪ (55) ಹತ್ಯೆಗೈದ ಆರೋಪಿಯಾಗಿದ್ದಾನೆ. ಆರೋಪಿ ಹಾಗೂ ಆತನ ಪತ್ನಿಯ ನಡುವೆ ಪ್ರಿಯಕರನ ವಿಚಾರವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಹಾನಗಲ್ ಗ್ಯಾಂಗ್‌ರೇಪ್ ಕೇಸ್ – 58 ದಿನಗಳ ನಂತ್ರ 873 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ಆರೋಪಿಯನ್ನು ಪಾತಪಾಳ್ಯ ಠಾಣೆ ಪೊಲೀಸರು (Police) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಕ್ಕಳಿಗೆ ಕಚ್ಚಿ, ಐಸ್ ವಾಟರ್ ಸುರಿದು ಪತಿ ಮೇಲಿನ ಕೋಪ ತೀರಿಸಿಕೊಳ್ತಿದ್ದ ಪತ್ನಿ!