ಚಂಡೀಗಢ: ವ್ಯಕ್ತಿಯೊಬ್ಬ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದ (Haryana) ಮದನ ಖುರ್ದ್ (Madana Khurd) ಎಂಬಲ್ಲಿ ಸೋಮವಾರ ನಡೆದಿದೆ.
ಮೃತರ ಕುತ್ತಿಗೆ ಮತ್ತು ತಲೆಯ ಮೇಲೆ ಗುರುತುಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮೊದಲು ವ್ಯಕ್ತಿ ತನ್ನ ಹೆಂಡತಿ, ಮಗಳು ಮತ್ತು ಮಗನನ್ನು ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ನೇಣು ಬಿಗಿದುಕೊಂಡಿದ್ದಾನೆ. ಮೃತ ವ್ಯಕ್ತಿ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಅವರ ಮಗಳು ಜವಾಹರ ನವೋದಯ ವಿದ್ಯಾಲಯದಲ್ಲಿ (Jawahar Navodaya Vidyalaya) 11ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಮಗ 9ನೇ ತರಗತಿಯಲ್ಲಿ ಓದುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಬೃಹತ್ ಜಾಹೀರಾತು ಕಂಬವೇರಿ ಯುವಕ ಪುಂಡಾಟ
ದುಜಾನಾ ಪೊಲೀಸ್ ಠಾಣಾಧಿಕಾರಿ (SHO) ಸುನೀಲ್ ಕುಮಾರ್ ಮಾತನಾಡಿ, ಸೋಮವಾರ ಮನೆಯೊಂದರಲ್ಲಿ ನಾಲ್ವರು ಮೃತಪಟ್ಟಿರುವ ಬಗ್ಗೆ ನಮಗೆ ಮಾಹಿತಿ ಬಂದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ. ನಂತರ ವಿಧಿ ವಿಜ್ಞಾನ ಪ್ರಯೋಗಾಲಯದ (Forensic Science Laboratory team) ತಂಡ ತನಿಖೆಗಾಗಿ ಸಾಕ್ಷ್ಯಗಳನ್ನು (Evidence) ಸಂಗ್ರಹಿಸಿರುವುದಾಗಿ ತಿಳಿಸಿದ್ದಾರೆ.
ಮೃತನ ಸಹೋದರನ ಹೇಳಿಕೆ ಮೇರೆಗೆ ದುಜಾನಾ (Dujana) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಬೆಂಬಲಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದಕ್ಕೆ ಗಲಾಟೆ – ಮಾರಕಾಸ್ತ್ರ ಹಿಡಿದು ಎರಡು ಗುಂಪುಗಳು ಹೊಡೆದಾಟ