ಭೋಪಾಲ್: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲ್ಲುವ ಸಲುವಾಗಿ ಕಬ್ಬಿಣದ ಬಾಗಿಲಿಗೆ ವಿದ್ಯುತ್ ತಂತಿಯನ್ನು ಅಳವಡಿಸಿದ್ದನು. ಆದರೆ ಪತ್ನಿ ಬದಲಿಗೆ ಆಕೆಯ ತಾಯಿ ಬಾಗಿಲನ್ನು ಸ್ಪರ್ಶಿಸಿ ವಿದ್ಯುತ್ ಶಾಕ್‍ನಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಬೇತುಲ್ ( Betul) ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ಕೊತ್ವಾಲಿ ಪೊಲೀಸ್ ಠಾಣೆ (Kotwali police station) ವ್ಯಾಪ್ತಿಯ ಸೈಖೇಡಾ (Saikheda) ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಮದ್ಯ ವ್ಯಸನನಾಗಿದ್ದು, ಆಗಾಗ ಪತ್ನಿಯೊಂದಿಗೆ ಜಗಳವಾಡುತ್ತಿದ್ದನು. ಭಾನುವಾರ ರಾತ್ರಿ ಕೂಡ ಇದೇ ವಿಚಾರವಾಗಿ ದಂಪತಿ ನಡುವೆ ಮತ್ತೆ ಜಗಳವಾಗಿತ್ತು. ಇದರಿಂದ ಬೇಸತ್ತು ಹೆಂಡತಿ ತನ್ನ ತಾಯಿಯ ಮನೆಗೆ ಹೋಗಿದ್ದಳು. ಇದನ್ನೂ ಓದಿ: 8 ಜನರಿಗೆ ಅಂಗಾಂಗ ದಾನ – ಸಾವಿನಲ್ಲೂ ಸಾರ್ಥಕತೆ ಮೆರೆದ ಕೊಡಗಿನ ಶಿಕ್ಷಕಿ
ತನ್ನ ಪತ್ನಿ ಮನೆಯಿಂದ ಹೊರಟಿದ್ದಕ್ಕೆ ಕೋಪಗೊಂಡ ಆರೋಪಿ ತನ್ನ ಅತ್ತೆಯ ಮನೆಗೆ ಹೋಗಿ ಅಲ್ಲಿ ಕಬ್ಬಿಣದಿಂದ ತಯಾರಿಸಲಾಗಿದ್ದ ಬಾಗಿಲಿಗೆ ವಿದ್ಯುತ್ ತಂತಿಯಿಂದ ಜೋಡಿಸಿ ಹೆಂಡತಿಯನ್ನು ಕೊಲ್ಲಲು ಪ್ರಯತ್ನಿಸಿದ್ದಾನೆ. ಆದರೆ ಅಚಾನಕ್ ಆಗಿ ಆತನ ಅತ್ತೆ ಬಾಗಿಲನ್ನು ಸ್ಪರ್ಶಿಸಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮೊರಾರ್ಜಿ ದೇಸಾಯಿ ಶಾಲೆಯಲ್ಲಿ RSS ಶಿಬಿರಕ್ಕೆ ಅವಕಾಶ ಆರೋಪ- ಅನುಮತಿ ಕೊಟ್ಟಿಲ್ಲ ಎಂದ ಕೋಟಾ
ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನನ್ನು ಹಿಡಿಯುವ ಪ್ರಯತ್ನ ನಡೆಸಲಾಗುತ್ತಿದೆ. ಅಲ್ಲದೇ ಆರೋಪಿ ವಿರುದ್ಧ ಸೂಕ್ತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಅಪಲಾ ಸಿಂಗ್ ಹೇಳಿದ್ದಾರೆ.