ಕೋಲಾರ: ಫೇಸ್ ಬುಕ್ ಲೈವ್ ಮಾಡಿ ವಿಷ ಸೇವಿಸುವ ಮೂಲಕ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಈದ್ಗಾ ಮಸೀದಿ ಬಳಿ ನಡೆದಿದೆ.
ಸುಲೇಮಾನ್ (28) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಶ್ರೀನಿವಾಸಪುರ ಪಟ್ಟಣದ ಹೈದರಾಲಿ ಮೊಹಲ್ಲಾ ನಿವಾಸಿಯಾಗಿದ್ದಾರೆ.
Advertisement
ಇಂದು ಮಧ್ಯಾಹ್ನದ ವೇಳೆಗೆ ಶ್ರೀನಿವಾಸಪುರ ನಗರದ ಈದ್ಗಾ ಮಸೀದಿ ಬಳಿ ಕಾರಿನಲ್ಲಿ ಕುಳಿತು ವಿಷ ಸೇವಿಸಿದ ಸುಲೇಮಾನ್ ಅದನ್ನು ಫೇಸ್ಬುಕ್ನಲ್ಲಿ ಲೈವ್ ಮಾಡಿದ್ದ. ಈ ಸಂದರ್ಭದಲ್ಲಿ ಮೈದಾನದಲ್ಲಿದ್ದ ಸಾರ್ವಜನಿಕರು ಅನುಮಾನ ಮೇರೆಗೆ ಪರಿಶೀಲನೆ ನಡೆಸಿದ ಸಮಯದಲ್ಲಿ ವಿಷ ಸೇವನೆ ಮಾಡಿರುವುದು ತಿಳಿದು ಬಂದಿದೆ.
Advertisement
Advertisement
ಸುಲೇಮಾನ್ ವಿಷ ಸೇವನೆ ಮಾಡಿರುವುದು ಖಚಿತವಾಗುತ್ತಿದಂತೆ ಎಚ್ಚೆತ್ತ ಸ್ಥಳೀಯರು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದರು. ಅಂದಹಾಗೇ ಆತ್ಮಹತ್ಯೆಗೆ ಯತ್ನಿಸಿದಾತ ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು, ಇಬ್ಬರು ಮಕ್ಕಳನ್ನು ಹೊಂದಿದ್ದಾನೆ. ಆದರೆ ಈತ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂದು ತಿಳಿದು ಬಂದಿಲ್ಲ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.