ಲಕ್ನೋ: ಚಿರತೆ ಸೆರೆಗಾಗಿ ಇರಿಸಿದ್ದ ಬೋನಿಗೆ ವ್ಯಕ್ತಿಯೊಬ್ಬ ಸಿಕ್ಕಿಬಿದ್ದ ಘಟನೆ ಉತ್ತರ ಪ್ರದೇಶದ (Uttar Pradesh) ಬುಲಂದ್‍ಶಹರ್‌ನಲ್ಲಿ (Bulandshahr) ನಡೆದಿದೆ. ಚಿರತೆಯನ್ನು (Leopard) ಹಿಡಿಯಲು ಇರಿಸಿದ್ದ ಕೋಳಿಯನ್ನು ಹಿಡಿಯಲು ಹೋಗಿ ಬೋನಿನಲ್ಲಿ ಸಿಲುಕಿದ್ದಾನೆ. ಆತನನ್ನ ತಕ್ಷಣ ಬಿಡುಗಡೆ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅರಣ್ಯ ಇಲಾಖೆಯ ಸಿಬ್ಬಂದಿ ಬೋನ್ ಇರಿಸಿದ್ದ ಜಾಗಕ್ಕೆ ತೆರಳಿದಾಗ ಒಳಗೆ ಸಿಲುಕಿದ್ದ ವ್ಯಕ್ತಿಯನ್ನು ನೋಡಿ ಅಚ್ಚರಿಗೊಂಡಿದ್ದಾರೆ. ಬೋನಿನಲ್ಲಿ ಸೆರೆಯಾದ ವ್ಯಕ್ತಿಯ ವೀಡಿಯೋ ವೈರಲ್ ಆಗಿದೆ. ಬೋನಿನ ಸರಳುಗಳನ್ನು ಹಿಡಿದುಕೊಂಡು ರಕ್ಷಿಸುವಂತೆ ಕೂಗಿಕೊಳ್ಳುತ್ತಿರುವ ದೃಶ್ಯದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಜನಾರ್ದನ ರೆಡ್ಡಿ ಪಕ್ಷ ಧೂಳಿಪಟವಾಗಲಿದೆ: ಎಸ್. ಆರ್ ಹಿರೇಮಠ್ ಭವಿಷ್ಯ
Advertisement
#WATCH | Uttar Pradesh: A man got stuck in a cage, installed to nab a leopard, in Basendua village of Bulandshahr dist. Forest Dept says that the man had entered the cage to get a rooster that was kept there as bait for the leopard.
(Video: viral video confirmed by Forest Dept) pic.twitter.com/8ujj23I2AO
— ANI UP/Uttarakhand (@ANINewsUP) February 24, 2023
Advertisement
ಬೋನು ಇರಿಸಿದ್ದ ಭಾಗದಲ್ಲಿ ಚಿರತೆ ಓಡಾಡುವುದರ ಬಗ್ಗೆ ಮಾಹಿತಿ ಬಂದಿತ್ತು. ಬೋನು ಇರಿಸುವ ಮೊದಲು ಚಿರತೆಗಾಗಿ ಸ್ವಲ್ಪ ಹುಡುಕಾಟ ನಡೆಸಿದ್ದೆವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಈಗ ಚಿರತೆಗಳು ಹಳ್ಳಿ ಹಾಗೂ ನಗರಗಳಿಗೆ ಬರುವುದು ಸಾಮಾನ್ಯವಾಗಿದೆ. ಇತ್ತೀಚೆಗಷ್ಟೇ ಉತ್ತರಪ್ರದೇಶದ ಗಾಜಿಯಾಬಾದ್ (Ghaziabad) ನ್ಯಾಯಾಲಯದ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. ಬಳಿಕ ಚಿರತೆಯನ್ನು ಸೆರೆಹಿಡಿಯಲಾಗಿತ್ತು. ಇದನ್ನೂ ಓದಿ: ಕೊಲೆ ಆರೋಪಿ ಪತ್ತೆಗೆ ನೆರವಾಯ್ತು ಆ ಒಂದು ಮಿಸ್ಡ್‌ಕಾಲ್!
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k