ಭೋಪಾಲ್: ಮೂವರು ಮಹಿಳೆಯರೊಂದಿಗೆ ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದ ವ್ಯಕ್ತಿಯೊಬ್ಬ ಬುಡಕಟ್ಟು ಪದ್ಧತಿಯ ಪ್ರಕಾರ ಏಕಕಾಲದಲ್ಲಿ ಮದುವೆಯಾಗಿ ಸುದ್ದಿಯಾಗಿದ್ದಾನೆ.
ಮಧ್ಯಪ್ರದೇಶದ ಭೋಪಾಲ್‍ನಿಂದ ಸುಮಾರು 400ಕಿ.ಮೀ ದೂರದಲ್ಲಿರುವ ನಾನ್‍ಪುರ್ ಗ್ರಾಮದ ಮಾಜಿ ಸರ್‍ಪಂಚ್ ಮೌರ್ಯ (42) ಅವರು ನಾನಾಬಾಯಿ, ಮೇಳ ಮತ್ತು ಸಕ್ರಿ ಅವರನ್ನು ಒಂದೇ ಮಂಟಪದಲ್ಲಿ ಮದುವೆಯಾಗಿದ್ದಾರೆ.
Advertisement
Advertisement
ಮೌರ್ಯ 2003ರಲ್ಲಿ ನಾನಾಬಾಯಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಂತರ ಒಂದೇ ಮನೆಯಲ್ಲೇ ವಾಸಿಸುತ್ತಿದ್ದರು. ಅವರೊಂದಿಗೆ ಮತ್ತಿಬ್ಬರು ಮಹಿಳೆಯರಾದ ಮೇಳ ಮತ್ತು ಸಕ್ರಿ ಕಳೆದ 15 ವರ್ಷಗಳಿಂದ ಒಟ್ಟಿಗೆ ವಾಸಿಸುತ್ತಿದ್ದರು. ಇದನ್ನೂ ಓದಿ: ರಾಹುಲ್ ಮದುವೆಯಲ್ಲಿ ಭಾಗವಹಿಸಿದ್ರೆ ಸಂಘಿಗಳಿಗೆ ಭಯ ಯಾಕೆ: ಕಾಂಗ್ರೆಸ್ ಪ್ರಶ್ನೆ
Advertisement
ವಿವಾಹ ಸಮಾರಂಭದಲ್ಲಿ ಮೂವರು ಮಹಿಳೆಯರ 6 ಮಕ್ಕಳು ಪಾಲ್ಗೊಂಡಿದ್ದರು. ಮೋರಿ ಫಾಲಿಯಾ ಗ್ರಾಮದಲ್ಲಿ ನಡೆದ ಈ ಕಾರ್ಯಕ್ರಮದ ಫೋಟೋ ಮತ್ತು ವೀಡಿಯೋ ಭಾರೀ ವೈರಲ್ ಆಗುತ್ತಿದೆ. ಮೂರು ದಿನಗಳ ಕಾಲ ಬುಡಕಟ್ಟು ಜನಾಂಗದವರ ಪ್ರಕಾರ ವಿಜೃಂಭಣೆಯಿಂದ ವಿವಾಹ ನಡೆಯಿತು. ಇದನ್ನೂ ಓದಿ: ತನಗಿಂತ 28 ವರ್ಷ ಚಿಕ್ಕವಳ ಕೈಹಿಡಿದ ಮಾಜಿ ಕ್ರಿಕೆಟಿಗ ಅರುಣ್ ಲಾಲ್
Advertisement
ಈ ಬಗ್ಗೆ ಮೌರ್ಯ ಮಾತನಾಡಿ, ಈ ಸಂಬಂಧಗಳು ಪ್ರಾರಂಭವಾದಾಗ ನನ್ನ ಪರಿಸ್ಥಿತಿ ಚೆನ್ನಾಗಿರಲಿಲ್ಲ. ಆದ್ದರಿಂದ ಸಂಬಂಧದಿಂದ ಮಕ್ಕಳನ್ನು ಪಡೆದರೂ ನಾನು ಅವರನ್ನು ಮದುವೆಯಾಗಲು ಸಾಧ್ಯವಾಗಲಿಲ್ಲ. ಆದರೆ ಈಗ ನಾವು ಮದುವೆ ಆಗುವ ಸ್ಥಿತಿಯಲ್ಲಿದ್ದೇವೆ ಎಂದು ಹೇಳಿದರು.