ವಿಜಯಪುರ: ಬೆಳ್ಳಂಬೆಳಗ್ಗೆ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಭಯಾನಕ ಘಟನೆ ನಗರದ ಶಿಖಾರಖಾನೆಯಲ್ಲಿ ನಡೆದಿದೆ.
ಸುರೇಶ್ ಬೆಡಸೂರ್ (45) ಕೊಲೆಯಾದ ವ್ಯಕ್ತಿ. ಸುರೇಶ್‍ನನ್ನು ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ, ಆತನ ತಲೆಯನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆಗೈಯಲಾಗಿದೆ. ಬೆಳ್ಳಂಬೆಳಗ್ಗೆ ರಸ್ತೆ ಮೇಲೆ ಸುರೇಶ್ ಮೃತದೇಹ ಕಂಡು ಭಯಗೊಂಡ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೊಲೆ ಮಾಡಿದವರು ಯಾರು? ಕೊಲೆಗೆ ಕಾರಣವೇನು ಎಂಬ ಬಗ್ಗೆ ನಿಖರ ಮಾಹಿತಿ ದೊರಕಿಲ್ಲ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.